ಬೀದರ್ ಕಲ್ಬುರ್ಗಿ ರಾಯಚೂರು ಕೊಪ್ಪಳ ಯಾದಗಿರಿ ಬಂದ್

Hyderabad Karnataka bandh on January 24
ಯಾದಗಿರಿ, ಜ. 24 : ಹೈದ್ರಾಬಾದ ಕರ್ನಾಟಕ ಪ್ರದೇಶದ ಸರ್ವಾಂಗೀಣ ಪ್ರಗತಿಗಾಗಿ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ತರುವಂತೆ ಆಗ್ರಹಿಸಿ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಹೋರಾಟಗಳ ಸಮನ್ವಯ ಸಮಿತಿ ಜ.24ರಂದು ಹೈದ್ರಾಬಾದ್ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ, ಹೈದ್ರಾಬಾದ್ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ, ವಿವಿಧ ಜನಪರ, ಕನ್ನಡಪರ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ರೈತ, ಕಾರ್ಮಿಕ, ವಿದ್ಯಾರ್ಥಿ, ಯುವಕರ ಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಬರುವ ಚಳಿಗಾಲದ ಬಜೆಟ್ ಅಧಿವೇಶನದಲ್ಲಿ 371ನೇ ಅನುಚ್ಛೇದದ ತಿದ್ದುಪಡಿಯಾಗಬೇಕು ಎಂದು ಹೈ.ಕ.ಪ್ರದೇಶದ ಹೋರಾಟಗಳ ಸಮನ್ವಯ ಸಮಿತಿ ಆಗ್ರಹಿಸಿದೆ. ಬೀದರ್, ಕಲ್ಬುರ್ಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲಾ ಮತ್ತು ತಾಲೂಕು ಕೇಂದ್ರ ಹಾಗೂ ನಗರ ಕೇಂದ್ರಗಳಲ್ಲಿ ಬಂದ್ ಆಚರಿಸಲಾಗುತ್ತಿದೆ.

ಬಂದ್‌ಗೆ ಸಹಕರಿಸುವಂತೆ ಹೈ.ಕ.ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮನವಿಮಾಡಿಕೊಂಡಿದ್ದಾರೆ. 371ನೇ ಕಲಂ ತಿದ್ದುಪಡಿಗೆ ನನ್ನ ಬೆಂಬಲ ಇದೆ ಎಂದು ಸಣ್ಣ ಕೈಗಾರಿಕೆ ಸಚಿವ ರಾಜೂಗೌಡ ಸೋಮವಾರ ಯಾದಗಿರಿ ನಗರದ ಪ್ರವಾಸಿ ಮಂದಿರದಲ್ಲಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+