ನಾನೇ ಕಿಂಗ್ ಮೇಕರ್, ಸರ್ಕಾರ ಬೀಳಿಸಬಲ್ಲೆ : ಎಚ್ಡಿಕೆ

ಕುಮಟಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದರು. ಸರ್ಕಾರ ಬೀಳುಸುವ ಕೆಲಸಕ್ಕೆ ಕೈ ಹಾಕಿಲ್ಲವಾದರೂ, ಪರಿಸ್ಥಿತಿ ಹೀಗೆ ಮುಂದುವರೆದರೆ ಜನರ ಹಿತದೃಷ್ಟಿಯಿಂದ ಸರ್ಕಾರ ಕೆಳಗಿಳಿಸಬೇಕಾದ್ದು ಅನಿವಾರ್ಯವಾಗಿದೆ ಎಂದರು.
ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರವು ಉತ್ತಮ ಆಡಳಿತ ನೀಡಲು ಸಂಪೂರ್ಣ ವಿಫಲವಾಗಿದೆ. ಬಿಜೆಪಿ ನಾಯಕರು ಅಧಿಕಾರದ ವ್ಯಾಮೋಹದಿಂದ ದಿನ ದೂಡುತ್ತಿದೆ. ಜನಹಿತ ಕಾಯುವುದರಲ್ಲಿ ಇವರಿಗೆ ಆಸಕ್ತಿಯಿಲ್ಲ.
ಯಡಿಯೂರಪ್ಪ ಸಾಧನೆ : ಮುರೂವರೆ ವರ್ಷ ನಾನು ಸರ್ಕಾರ ನಡೆಸಿಲ್ಲ. ಸರ್ಕಸ್ ನಡೆಸಿದ್ದೇನೆ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಎಲ್ಲೆಡೆ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ.
ಕೃಷಿ ಬಜೆಟ್ ಸರಿಯಾದ ಫಲ ನೀಡಿಲ್ಲ. ಕೃಷಿ ಬಜೆಟ್ ಮಂಡಿಸಿದ ನಂತರ ರಾಜ್ಯದಲ್ಲಿ ಅತಿ ಹೆಚ್ಚಿನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ರೈತರ ಆತ್ಮಹತ್ಯೆಯೇ ಯಡಿಯೂರಪ್ಪ ಅವರ ಸಾಧನೆ ಎಂದು ಕುಮಾರಸ್ವಾಮಿ ಟೀಕಿಸಿದರು.












Click it and Unblock the Notifications