ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಲ್ಸೆಕ್ ಟೆಕ್ನಾಲಜೀಸ್ ಉದ್ಯೋಗಿಗಳಿಂದ ರಕ್ತದಾನ

By Prasad
|
Google Oneindia Kannada News

Blood donation by Allsec technologies employees
ಬೆಂಗಳೂರು, ಜ. 28 : ಬಿ.ಪಿ.ಓ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಲ್ಸೆಕ್ ಟೆಕ್ನಾಲಜೀಸ್ ಕಂಪನಿ, ಜ.27ರಂದು, 63ನೇ ಗಣರಾಜ್ಯೋತ್ಸವದ ಅಂಗವಾಗಿ ಸಂಜಯನಗರದ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಿತ್ತು.

ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯ ವೈದ್ಯರ ಉಪಸ್ತಿತಿಯಲ್ಲಿ ನಡೆದ ಈ ಶಿಬಿರದಲ್ಲಿ ಅಲ್ಸೆಕ್ ನ ಉದ್ಯೋಗಿಗಳು ಉತ್ಸಾಹದಲ್ಲಿ ಪಾಲ್ಗೊಂಡಿದ್ದರು. ಒಟ್ಟಾರೆ 47 ಯೂನಿಟ್ ರಕ್ತ ಸಂಗ್ರಹಿಸಿ ಲಯನ್ಸ್ ಕ್ಲಬ್ ಗೆ ಕಳುಹಿಸಿಕೊಡಲಾಯ್ತು.

ಕೆಲ ದಿನಗಳ ಹಿಂದೆ ಜ.12ರಂದು ಸ್ವಾಮಿ ವಿವೇಕಾನಂದ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಕೂಡ ರಾಮಯ್ಯ ಸಂಸ್ಥೆ ಲಯನ್ಸ್ ಬ್ಲಡ್ ಬ್ಯಾಂಕ್ ಜೊತೆ ಕೈಜೋಡಿಸಿತ್ತು.

English summary
Leading B.P.O Company Allsec technologies had organised a Blood Donation Camp in Association with Lion's Club Sanjayanagar on the occasion of Republic Day celebrations in Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X