ಐಎಎಸ್ ಪತ್ನಿ ಅನು ಬಂಧನ, ತಕ್ಷಣ ಜಾಮೀನು

ಐಎಎಸ್ ಅಧಿಕಾರಿ ಆಗಿರುವ ಪಂಕಜ್ ಕುಮಾರ್ ಪಾಂಡೆ ಅವರ ಪತ್ನಿ ಅನು ಭಾನುವಾರ ರಾತ್ರಿ ಸಿಸಿಎಲ್ ಕ್ರಿಕೆಟ್ ಪಂದ್ಯಾಟ ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದರು. ಆ ವೇಳೆ ಅವರು ಹಲಸೂರುಗೇಟ್ ಪೊಲೀಸ್ ಠಾಣೆ ಮಹಿಳಾ ಇನ್ಸ್‌ಪೆಕ್ಟರ್ ಅಂಜುಮಾಲಾ ನಾಯಕ್ ಹಾಗೂ ಪೇದೆಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 353ರ ಪ್ರಕಾರ ಸೋಮವಾರ ಬೆಳಗ್ಗೆ ಪ್ರಕರಣ ದಾಖಲಿಸಲಾಗಿತ್ತು.
ಬಳಿಕ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು. ಅದರಂತೆ, ಸೋಮವಾರ ಮಧ್ಯಾಹ್ನ ಕಬ್ಬನ್ ಪಾರ್ಕ್ ಪೊಲೀಸರು ಅನು ವಾಸವಿರುವ ತಾವರೆಕೆರೆ ಸಮೀಪದ ಬೋವಿ ಕಾಲೊನಿಯ ಸೇಂಟ್ ಜಾನ್ ವುಡ್ಸ್ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು. ಆದರೆ, ಮನೆಗೆ ಬೀಗ ಹಾಕಿದ್ದ ಕಾರಣ ಪೊಲೀಸರು ಬರಿಗೈಯಲ್ಲಿ ವಾಪಸಾಗಿದ್ದರು.
ಅನು ಮೊಬೈಲ್ ನೆಟ್‌ವರ್ಕ್ ಜಾಡು ಹಿಡಿದು ಆಕೆ ಉಳಿದುಕೊಂಡಿದ್ದ ಜಾಗವನ್ನು ಪೊಲೀಸರು ಖಚಿತಪಡಿಸಿಕೊಂಡರು. ನಂತರ, ಜೀವನ್ ಭೀಮಾನಗರದ ಸರ್ಕಾರಿ ವಸತಿಗೃಹವೊಂದರಲ್ಲಿ ತಲೆಮರೆಸಿಕೊಂಡಿದ್ದ ಅನು ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು.












Click it and Unblock the Notifications