ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ವಿದ್ಯುತ್ ಕೊರತೆಯನ್ನು ನೀಗುವಳೆ ಶರಾವತಿ?

By Prasad
|
Google Oneindia Kannada News

Power generation at Sharavathi hydroelectric project
ಶಿವಮೊಗ್ಗ, ಜ. 31 : ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಿದ್ಯುತ್ ಉತ್ಪಾದಿಸಿದ ಹೆಗ್ಗಳಿಕೆ ಹೊಂದಿರುವ ಶರಾವತಿ ಹೈಡ್ರೋ-ಎಲೆಕ್ಟ್ರಿಕ್ ಕಾರ್ಖಾನೆ ಫೆಬ್ರವರಿ 15ರಿಂದ ವಿದ್ಯುತ್ ಉತ್ಪಾದನೆಯನ್ನು ಮತ್ತೆ ಆರಂಭಿಸಲಿದ್ದು, ವಿದ್ಯುತ್ ಕ್ಷಾಮ ಎದುರಿಸುತ್ತಿರುವ ಕರ್ನಾಟಕದಲ್ಲಿ ಬೇಸಿಗೆಯಲ್ಲಿಯೂ ಮಿಂಚಿನ ಸಂಚಾರವಾದಂತಾಗಿದೆ.

ಶರಾವತಿ ವಿದ್ಯುದಾಗಾರಕ್ಕೆ ನೀರನ್ನು ಪೂರೈಸುವ ಕಾಲುವೆ ರಿಪೇರಿ ಕಾಮಗಾರಿ ಮುಕ್ತಾಯವಾಗಿದೆ. 22 ಕೋಟಿ ರು. ವೆಚ್ಚದಲ್ಲಿ ನ.17, 2011ರಿಂದ ದುರಸ್ತಿ ಕಾಮಗಾರಿ ಆರಂಭವಾಗಿತ್ತು. ಮೊದಲ ಹಂತದ ಕೆಲಸ ಫೆ.15ರವರೆಗೆ ಮುಗಿಯಲಿದೆ. ಎರಡನೇ ಹಂತದ ಕಾಮಗಾರಿ 2012ರ ನವೆಂಬರ್‌ನಲ್ಲಿ ಆರಂಭವಾಗಲಿದೆ ಮತ್ತು 2013ರ ಫೆಬ್ರವರಿಯಲ್ಲಿ ಮುಗಿಯಲಿದೆ.

ವಿದ್ಯುತ್ ಉತ್ಪಾದನೆ ಸರಾಗವಾಗಿ ಆರಂಭವಾದರೆ ಈ ಕಾರ್ಖಾನೆಯಲ್ಲಿ ಪ್ರತಿದಿನ ಸರಾಸರಿ 23 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಆಗಲಿದೆ. ಅಲ್ಲದೆ, ಜಿಲ್ಲೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ನೀರಿನ ಸಂಗ್ರಹ ಇರುವುದರಿಂದ ಬೇಸಿಗೆಯಲ್ಲಿ ವಿದ್ಯುತ್ ಉತ್ಪಾದನೆಗೆ ಅಷ್ಟೊಂದು ಕಡಿಮೆಯಾಗಲಾರದು ಎಂದು ಶರಾವತಿ ಹೈಡ್ರೋ-ಎಲೆಕ್ಟ್ರಿಕ್ ಯೋಜನೆಯ ಇಂಜಿನಿಯರ್ ಹನುಮಂತಪ್ಪ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ರಾಜ್ಯ ಈ ಬಾರಿ ಸಾಕಷ್ಟು ವಿದ್ಯುತ್ ಕೊರತೆಯನ್ನು ಎದುರಿಸುತ್ತಿದೆ. ಕಲ್ಲಿದ್ದಲು ಪೂರೈಕೆ ಕೊರತೆ ಹಿನ್ನೆಲೆಯಲ್ಲಿ ರಾಯಚೂರು ಉಷ್ಣ ವಿದ್ಯುತ್ ಸ್ಥಾವರದಲ್ಲಿಯೂ ವಿದ್ಯುತ್ ಉತ್ಪಾದನೆ ಸಮರ್ಪಕವಾಗಿ ಆಗುತ್ತಿಲ್ಲ. ವಿದ್ಯುತ್ ಕೊರತೆ ಒಂದೆಡೆಯಾದರೆ, ವಿದ್ಯುತ್ ಬೆಲೆ ಏರಿಕೆ ಜನಸಾಮಾನ್ಯರನ್ನು ಆತಂಕಕ್ಕೀಡು ಮಾಡಿದೆ. ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ದರ ಮತ್ತೆ ಏರುವ ಸಾಧ್ಯತೆಯಿದೆ.

English summary
Power generation at Sharavathi hydroelectric project will be normal from February 15, 2012. 1st phase of repair work to the canal which supplies water to the project will be complete by Feb 15. This power station generates 23 million units on an average per day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X