ಕದಿರೇನಹಳ್ಳಿ ಅಂಡರ್ ಪಾಸ್ ಮಾರ್ಚ್ ತಿಂಗಳಲ್ಲಿ ಮುಕ್ತ?

ಈ ನಡುವೆ ಅಂಡರ್ ಪಾಸ್ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದಿರುವ ಗುತ್ತಿಗೆದಾರರಿಗೆ 80 ಲಕ್ಷ ರು. ದಂಡ ವಿಧಿಸಲಾಗಿದೆ. ವಾಹನ ದಟ್ಟಣೆ ಹಾಗೂ ಇನ್ನಿತರ ಅಡಚಣೆಯಿಂದ ಕಾಮಗಾರಿ ವಿಳಂಬವಾಗಿದೆ ಎಂದು ಸದಾನಂದ ಗೌಡರು ಹೇಳಿದರು.
ವಿಧಾನಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಡಾ. ಎಂಆರ್ ದೊರೈಸ್ವಾಮಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸದಾನಂದ ಗೌಡರು, ಅಂಡರ್ ಪಾಸ್ ಕಾಮಗಾರಿ ಈಗಾಗಲೇ ಶೇ. 80 ರಷ್ಟು ಪೂರ್ಣಗೊಂಡಿದೆ. ಉಳಿದ ಕಾಮಗಾರಿ ಮಾರ್ಚ್ ತಿಂಗಳ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.
ಕನಕಪುರ ರಸ್ತೆಯ ಭಾಗದಿಂದ ತಡೆಗೋಡೆ ನಿರ್ಮಾಣ ಕಾರ್ಯ ಸುಅಮರು ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿದೆ. ಈ ಭಾಗದ ಸರ್ವೀಸ್ ರಸ್ತೆಗಳಲ್ಲಿ ಮತ್ತು ಡಕ್ ನ ಮೇಲ್ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸದಾನಂದ ಗೌಡರು ಹೇಳಿದರು.












Click it and Unblock the Notifications