ಕೆಜಿಎಫ್: ಸ್ವಯಂಪ್ರೇರಿತ ಸಂಪೂರ್ಣ ಬಂದ್

ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ದಲಿತ ಸಂಘರ್ಷ ಸಮಿತಿ, ಡಿವೈಎಫ್‌ಐ, ಎಬಿವಿಪಿ ಸೇರಿದಂತೆ ಹಲವು ಸಂಘಟನೆಗಳು ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದೆ. ಇದುವರೆವಿಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ.
ಮುಂಜಾಗರೂಕತಾ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಸ್ ಸಂಚಾರ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಎಲ್ಲಕ್ಕೂ ಬಂಗಾರಪೇಟೆಯಲ್ಲೇ ಆಶ್ರಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮೂಲ ಸೌಕರ್ಯಗಳನ್ನು ಒದಗಿಸಿ, ಹಲವು ವರ್ಷಗಳ ಬೇಡಿಕೆಯಾಗಿರುವ ತಾಲೂಕು ಕೇಂದ್ರ ಸ್ಥಾನಮಾನವನ್ನು ಶೀಘ್ರವೇ ಒದಗಿಸದಿದ್ದಲ್ಲಿ, ತೀವ್ರವಾದ ಹೋರಾಟ ನಡೆಸುವುದಾಗಿ ಹಲವು ಸಂಘಟನೆಗಳು ಘೋಷಿಸಿದೆ.












Click it and Unblock the Notifications