ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಾಂಧಿಬಜಾರ್: ಸಿಎಂ ಸದಾನಂದಗೌಡ ಏನನ್ನುತ್ತಾರೆ?

By Srinath
|
Google Oneindia Kannada News

gandhi-bazaar-flower-markets-razed-seems-permanent-dvs
ಬೆಂಗಳೂರು,ಫೆ.4: ಬಸವನಗುಡಿ ಗಾಂಧಿಬಜಾರಿನ ಹೂ-ಹಣ್ಣು-ತರಕಾರಿ ಅಂಗಡಿಗಳನ್ನು ಬಿಬಿಎಂಪಿ ನೆಲಸಮ ಮಾಡಿದ್ದು ಶಾಶ್ವತವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಅವರೇ ಸುಳಿವು ನೀಡಿದ್ದಾರೆ. Thanks to pedestrians long standing demand ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸದಾನಂದಗೌಡರು ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಹೇಳಿದ್ದಾರೆ.

ಟ್ಯಾಗೂರ್ ವೃತ್ತದಿಂದ ಡಿವಿಜಿ ರೋಡ್ ವರೆಗೆ ಗಾಂಧಿಬಜಾರ್ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಫುಟ್ ಪಾತ್ ಮತ್ತು ರಸ್ತೆಯನ್ನೂ ಆಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಜತೆಗೆ ಇಂತಹ ವ್ಯಾಪಾರಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿತ್ತು. ರಸ್ತೆಯ ಅತಿಕ್ರಮಣದಿಂದಾಗಿ ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿತ್ತು. ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳ ಮತ್ತು ರಸ್ತೆ ಬದಿಯ ಚರಂಡಿಗಳಲ್ಲಿ ಕಸ ತುಂಬಿಕೊಳ್ಳುವುದು ನಡೆಯುತ್ತಿತ್ತು. (ಗಾಂಧಿಬಜಾರ್ ಹೂ ಮಾರುಕಟ್ಟೆಗಳ ಧ್ವಂಸ'ದ ಸಮಗ್ರ ಚಿತ್ರಣಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)

ಹೀಗಾಗಿ ಸಾರ್ವಜನಿಕರು ಮತ್ತು ಸಂಚಾರಿ ಪೊಲೀಸ್ ಇಲಾಖೆ ಸಹ ಆಗಾಗ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಪಾಲಿಕೆಗೆ ಪತ್ರ ಬರೆಯುತ್ತಿದ್ದರು. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ಆದೇಶ ಸಹ ಇರುವುದರಿಂದ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸುವುದು ಅನಿವಾರ್ಯವಾಯಿತು ಎಂದು ಸಿಎಂ ಸದಾನಂದಗೌಡ ಹೇಳಿದರು.

ಸದಸ್ಯ ಆರ್ ವಿ ವೆಂಕಟೇಶ್‌ರ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಬೀದಿ ವ್ಯಾಪಾರಿಗಳು ತನ್ನ ಕಚೇರಿಗೆ ಬಂದು ಮನವಿಪತ್ರ ಸಲ್ಲಿಸಿದ್ದಾರೆ. ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರಿಸಲು ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಅವರ ಬದುಕಿಗೆ ನೆರವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

English summary
BBMP was demolished all the flower markets, fruit stalls and vegetable stalls in Gandhi Bazaar, Bangalore on Jan 23 as it was a long standing demand of pedestrians said Chief Minister Sadananda Gowda in Upper House yesterday (Feb 3). But he assured the excaveted vendors will be accomadated else where.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X