ಯಡಿಯೂರಪ್ಪಗೆ ಲೋಕಾಯುಕ್ತ ಕೋರ್ಟ್ ಬುಲಾವ್
ಬೆಂಗಳೂರು,
ಫೆ. 5: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ಶನಿವಾರ ಸಮನ್ಸ್ ಜಾರಿ ಮಾಡಲು ಆದೇಶಿಸಿದೆ. ಮಾರ್ಚ್ 3ರಂದು ಕೋರ್ಟ್‌ನಲ್ಲಿ ಖುದ್ದು ಹಾಜರು ಇರುವಂತೆ ನ್ಯಾಯಾಧೀಶರು ಆರೋಪಿಗೆ ಆದೇಶಿಸಿದ್ದಾರೆ. ಆದರೆ ಲೋಕಾಯುಕ್ತ ಕೋರ್ಟ್ ಸಮನ್ಸ್ ಜಾರಿ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಬಂಧನದ ಆತಂಕವಿಲ್ಲ. ಈ ದೂರಿನ ಸಂಬಂಧ ಹೈಕೋರ್ಟ್ ಈಗಾಗಲೇ ನಿರೀಕ್ಷಣಾ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ನಿರಾತಂಕವಾಗಿರಬಹುದು. id="toptextpromo">ವಕೀಲ
ಸಿರಾಜಿನ್ ಬಾಷಾ ದಾಖಲು ಮಾಡಿರುವ ಭೂ ಡಿನೋಟಿಫಿಕೇಷನ್ ಹಗರಣದ 1 ನೇ ದೂರಿಗೆ ಸಂಬಂಧಿಸಿದಂತೆ ಸಮನ್ಸ್ ಜಾರಿಗೊಳಿಸಿ ನ್ಯಾಯಾಧೀಶ ಎನ್ ಕೆ ಸುಧೀಂದ್ರ ರಾವ್ ಆದೇಶಿಸಿದ್ದಾರೆ. ಇವರ ಜತೆಗೆ ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಯಡಿಯೂರಪ್ಪ ಪುತ್ರ, ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಅಳಿಯ ಸೋಹನ್‌ಕುಮಾರ್, ಮಾಜಿ ಶಾಸಕ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಹಾಗೂ ಧವಳಗಿರಿ ಪ್ರಾಪರ್ಟೀಸ್ ನಿರ್ದೇಶಕರಿಗೂ ಸಮನ್ಸ್ ಜಾರಿಗೆ ಆದೇಶಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ಇದೇ
ರೀತಿ ಕಳೆದ ವರ್ಷ ಆಗಸ್ಟ್ 8ರಂದು ಸಿರಾಜಿನ್ ಬಾಷಾ ಅವರು ನೀಡಿದ 2 ಮತ್ತು 3ನೇ ಪ್ರಕರಣದಲ್ಲಿ ಸಮನ್ಸ್ ಜಾರಿಗೊಳಿಸಲಾಗಿತ್ತು. ಬಳಿಕ ಈ ಪ್ರಕರಣಗಳಲ್ಲಿ ಯಡಿಯೂರಪ್ಪ ಮತ್ತು ಕೃಷ್ಣಯ್ಯ ಶೆಟ್ಟಿ ಅವರನ್ನು ಜೈಲಿಗೂ ಕಳುಹಿಸಲಾಗಿತ್ತು.











Click it and Unblock the Notifications