ಇನ್ಮುಂದೆ ಹೋಟೆಲ್‌ಗಳಲ್ಲಿ ಧೂಮಪಾನ ಮಾಡುವಂತಿಲ್ಲ

smoking-to-be-banned-in-bangalore-hotels
ಬೆಂಗಳೂರು, ಫೆ.5: ಇನ್ಮುಂದೆ ಹೋಟೆಲ್‌ಗಳಲ್ಲಿ ಧೂಮಪಾನ ಮಾಡುವಂತಿಲ್ಲ. ಸದ್ಯಕ್ಕೆ ಬೆಂಗಳೂರಿನ ಎಲ್ಲ ಹೋಟೆಲ್ ಮತ್ತು ರೆಸ್ಟೊರೆಂಟ್‌ಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗುವುದು. ನಂತರ ಇದನ್ನು ರಾಜ್ಯದಾದ್ಯಂತ ಜಾರಿಗೆ ತರಲಾಗುವುದು ಎಂದು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ ತಿಳಿಸಿದೆ.

ಗಮನಾರ್ಹವೆಂದರೆ, ಈಗಾಗಲೇ ಸಾರ್ವಜನಿಕ ಸ್ಥಳಗಳಾದ ಹೋಟೆಲ್, ಬಸ್ ನಿಲ್ದಾಣ, ರೈಲು ನಿಲ್ದಾಣ, ಚಿತ್ರಮಂದಿರ, ರೆಸ್ಟೊರೆಂಟ್‌ಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಸುಪ್ರೀಮ್ ಕೋರ್ಟ್ ನಿರ್ದೇಶನದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಸಂಬಂಧ ಕಾಯಿದೆಗಳನ್ನು ತಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ.

ಹೋಟೆಲ್‌ನಲ್ಲಿ ಧೂಮಪಾನಕ್ಕೆ ಅವಕಾಶ ನೀಡಿದರೆ ಹೋಟೆಲ್‌ನ ನೌಕರರು ಮತ್ತು ಇತರೆ ಗ್ರಾಹಕರಿಗೆ ತೊಂದರೆಯಾಗುತ್ತದೆ. ಧೂಮಪಾನದಿಂದ ಗ್ರಾಹಕರು ಮತ್ತು ನೌಕರರ ಆರೋಗ್ಯಕ್ಕೆ ಹಾನಿ ಉಂಟಾಗದಂತೆ ರಕ್ಷಿಸುವುದು ನಮ್ಮ ಕರ್ತವ್ಯ. ಹಾಗಾಗಿ ಎಲ್ಲ ಹೋಟೆಲ್‌ಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧಿಸಿ ನಾಮಫಲಕಗಳನ್ನು ಅಳವಡಿಸಲಾಗುವುದು. ಅಗತ್ಯಬಿದ್ದರೆ ನಿಯಮ ಪ್ರಕಾರ ಧೂಮಪಾನಕ್ಕೆ ಪ್ರತ್ಯೇಕ ಅವಕಾಶ ಕಲ್ಪಿಸಲಾಗುವುದು' ಎಂದು ಸಂಘದ ಅಧ್ಯಕ್ಷ ವಾಸುದೇವ ಅಡಿಗ ತಿಳಿಸಿದ್ದಾರೆ.

ಬಾರ್ ಮತ್ತು ರೆಸ್ಟೊರೆಂಟ್‌ಗಳಲ್ಲಿಯೂ ನಿಷೇಧ? : 'ಬಾರ್ ಮತ್ತು ರೆಸ್ಟೊರೆಂಟ್‌ಗಳಲ್ಲಿ ಇನ್ನು ಮುಂದೆ ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ವಿದೇಶಗಳಲ್ಲಿ ಬಾರ್, ಪಬ್ ಹಾಗೂ ರೆಸ್ಟೊರೆಂಟ್‌ಗಳಲ್ಲಿ ಧೂಮಪಾನವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಅದೇ ಮಾದರಿಯನ್ನು ಇಲ್ಲಿಯೂ ಜಾರಿಗೆ ತರಲು ಪ್ರಯತ್ನಿಸಲಾಗುವುದು' ಎಂದು ಬೆಂಗಳೂರು ಬಾರ್ ಮತ್ತು ರೆಸ್ಟೊರೆಂಟ್‌ಗಳ ಸಂಘದ ಅಧ್ಯಕ್ಷ ಆಶಿಶ್ ಕೊಠಾರಿ ಹೇಳಿದ್ದಾರೆ.

ಹೋಟೆಲ್ ಗ್ರಾಹಕರಿಗೆ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆಯ (ಸಿಒಟಿಪಿಎ-ಕೊಟ್ಪಾ) ಬಗ್ಗೆ ಅರಿವು ಮೂಡಿಸಲಾಗುವುದು. ಈ ಸಂಬಂಧ ಎಲ್ಲ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಫಲಕಗಳನ್ನು ಹಾಕಲಾಗುವುದು' ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+