ಚಾರಣ: ಕಾಲೇಜು ವಿದ್ಯಾರ್ಥಿ ನವೀನ್ ಶವ ಪತ್ತೆ

ಸಕಲೇಶಪುರ, ಫೆ.6: ಇಲ್ಲಿನ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಬೆಂಗಳೂರಿನಿಂದ ಚಾರಣಕ್ಕೆ ಬಂದಿದ್ದ ವಿದ್ಯಾರ್ಥಿಗಳಲ್ಲಿ ಒಬ್ಬ ಸಾವಿಗೀಡಾಗಿದ್ದು, 13 ಮಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ.13 ಮಂದಿಯನ್ನು ಗುಂಡ್ಯ ಐಬಿಯಲ್ಲಿ ಇರಿಸಲಾಗಿದ್ದು, ಎಲ್ಲರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಇದೀಗ ಬಂದ ಸುದ್ದಿ(ಸಮಯ 3.15): ನೀರುಪಾಲಾಗಿದ್ದ ನವೀನ್ ಮೃತ ದೇಹವನ್ನು ಪತ್ತೆ ಮಾಡಲಾಗಿದೆ. ಗುಂಡ್ಯ ಅರಣ್ಯ ಕಚೇರಿಗೆ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಕಬ್ಬಿನಾಲೆ ಫಾಲ್ಸ್(ಕುತ್ತಿಚೆಟ್ಟಾ ಫಾಲ್ಸ್) ಅಥವಾ ಅಡ್ಡಹೊಳೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ ಎನ್ನಲಾದ ವಿದ್ಯಾರ್ಥಿಯನ್ನು ನವೀನ್ ಕುಮಾರ್(22) ಎಂದು ಗುರುತಿಸಲಾಗಿದೆ. ಎರಡು ದಿನ ಕಳೆದರೂ ಮೃತ ನವೀನ್ ಶವ ಇನ್ನೂ ಪತ್ತೆಯಾಗಿರಲಿಲ್ಲ.

ಮಂಗಳೂರಿನಿಂದ ಸ್ಕ್ಯೂ ಡೈವರ್ಸ್ ಗಳನ್ನು ಕರೆಸಿಕೊಳ್ಳಲಾಗುತ್ತಿದ್ದು, ಶೋಧ ಕಾರ್ಯ ಮುಂದುವರೆಯಲಿದೆ ಎಂದು ಸಕಲೇಶಪುರ ಗ್ರಾಮಾಂತರ ಪೊಲೀಸರು ಹೇಳಿದ್ದಾರೆ. ಅರಣ್ಯ ಇಲಾಖೆ ಸೂಚನೆ ಮೇರೆಗೆ ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳ ಮನೆಯವರಿಗೆ ವಿಷಯ ತಿಳಿಸಿದ್ದೇವೆ ಎಂದು ಸಕಲೇಶಪುರ ಡಿವೈಎಸ್ಪಿ ಉಪೇಂದ್ರ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಬಿ.ಎಂ.ಎಸ್‌.ಇಂಜಿನಿಯರಿಂಗ್‌ ಕಾಲೇಜಿನಲ್ಲಿ 6ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿಗಳು ರಕ್ಷಿತಾರಣ್ಯ ಪ್ರದೇಶದಲ್ಲಿ ಅನುಮತಿ ಇಲ್ಲದೆ ತಿರುಗಾಟ ಮಾಡಿದ ಪರಿಣಾಮವಾಗಿ ತೊಂದರೆ ಅನುಭವಿಸಬೇಕಾಗಿದೆ.

ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿ, ರಕ್ಷಿತಾರಣ್ಯದಲ್ಲಿ ಅತಿಕ್ರಮ ಪ್ರವೇಶ ಮಾಡಿರುವ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಎಲ್ಲರನ್ನೂ ಸಕಲೇಶಪುರದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ನವೀನ್ ಕುಮಾರ್ ಸಾವು, ಶವ ಕಾಣೆ ಹೇಗಾಯ್ತು?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+