ರೇವ್ ಪಾರ್ಟಿ ವಿರುದ್ಧ ಸಿಡಿದೆದ್ದ ಉಡುಪಿ ಜನತೆ

'ಸ್ಪ್ರಿಂಗ್ ಝೂಕ್" ಅಂತಾರಾಷ್ಟ್ರೀಯ ಉತ್ಸವ ಬಹಳಷ್ಟು ವಿವಾದಕ್ಕೆ ಕಾರಣವಾಗಿದ್ದು, ಅಲ್ಲಿ ವಿದೇಶಿ ಪ್ರವಾಸಿಗರು ಮುಕ್ತವಾಗಿ ನಡೆಸಿದ ಕಾಮಕೇಳಿ, ಅಶ್ಲೀಲ ವೀಡಿಯೊ ತುಣುಕುಗಳು ಇದೀಗ ಬಹಿರಂಗಗೊಂಡಿವೆ. ಮಾಧ್ಯಮಗಳಿಗೆ ಲಭ್ಯವಾಗಿರುವ ವೀಡಿಯೊದಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಯಲ್ಲಿಯೇ ವಿದೇಶಿ ಜೋಡಿಯೊಂದು ಮುಕ್ತವಾಗಿ ಕಾಮಕೇಳಿ ನಡೆಸಿ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳಿವೆ.
ನಾಗರಿಕ ಸಮಿತಿ ಪ್ರತಿಭಟನೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಅಶ್ಲೀಲತೆ, ಅಸಭ್ಯ ವರ್ತನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಸೋಮವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಸಂಸ್ಕೃತ ಕಾಲೇಜಿನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕನಕದಾಸ ರಸ್ತೆಯಿಂದ ರಥಬೀದಿಗೆ ಆಗಮಿಸಿ, ಶ್ರೀಕೃಷ್ಣಮಠದ ಮಂದೆ ಸಾಗಿತು. ಬಳಿಕ ರಥಬೀದಿಯಲ್ಲಿ ಪ್ರತಿಭಟನೆ ನಡೆಸಿ, ರೇವು ಪಾರ್ಟಿಗೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಲಾಯಿತು.
ಅಶ್ಲೀಲವಾಗಿ ಬಟ್ಟೆ ಧರಿಸಿದ್ದ ಗೊಂಬೆಯನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಿ, ಬಳಿಕ ಅದಕ್ಕೆ ಭಾರತೀಯ ಸಂಸ್ಕೃತಿಯಂತೆ ಸೀರೆ, ಕುಂಕುಮ, ಬಳೆಗಳನ್ನು ತೊಡಿಸಲಾಯಿತು. ಭಾರತೀಯ ಸಂಸ್ಕೃತಿಯನ್ನು ಉಳಿಸುವಂತೆ ಹಾಗೂ ವಿದೇಶಿ ಸಂಸ್ಕೃತಿಯನ್ನು ವಿರೋಧಿಸುವಂತೆ ಪ್ರತಿಭಟನ ಕಾರರು ಘೋಷಣೆಗಳನ್ನು ಕೂಗಿದರು. ಇದರಲ್ಲಿ ಹರೇ ಕೃಷ್ಣ ಸಂಸ್ಥೆಯ ವಿದೇಶಿ ಮಹಿಳೆಯರು ಕೂಡ ಪಾಲ್ಗೊಂಡರು. ಪ್ರತಿಭಟನೆಯಲ್ಲಿ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ, ರಮಾದೇವಿ, ಪ್ರಭಾ ಶೆಟ್ಟಿ, ಗಣೇಶ್‌ರಾಜ್ ಸರಳಬೆಟ್ಟು, ಶೈಲಾ ರೈ, ಶಾಂತಿ ಮೊದಲಾದವರು ಉಪಸ್ಥಿತರಿದ್ದರು.
ಶಿರೂರು ಸ್ವಾಮೀಜಿ ಆಕ್ಷೇಪ: ರಮಣೀಯ ಹಾಗೂ ಪವಿತ್ರವಾದ ಸೈಂಟ್ ಮೇರಿಸ್ ದ್ವೀಪವನ್ನು ಉತ್ಸವದ ಹೆಸರಿನಲ್ಲಿ ಹಾಳು ಮಾಡಲಾಗುತ್ತಿದೆ. ಹಣ ಮಾಡುವ ದುರಾಲೋಚನೆಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ವಿಷಾದನೀಯ ಎಂದು ಶಿರೂರು ಮಠಾಧೀಶ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಈ ವಿಷಯ ತಿಳಿದು ಅಲ್ಲಿನ ವಾಸ್ತವಾಂಶ ತಿಳಿಯಲು ನಿನ್ನೆ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳಿದ್ದೆ. ಆ ಸಂದರ್ಭದಲ್ಲಿ ಅಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಹಾಗೂ ಶಾಸಕ ರಘುಪತಿ ಭಟ್ ಅವರಲ್ಲಿ ಈ ಅವ್ಯವಸ್ಥೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದೆ. ಜಿಲ್ಲಾಧಿಕಾರಿಗೆ ತನ್ನ ತಪ್ಪಿನ ಬಗ್ಗೆ ಅರಿವಾಗಿರುವುದನ್ನು ಅವರು ಹೇಳಿಕೊಂಡರು ಎಂದರು.
ಗೋಕರ್ಣ, ಹಂಪಿ ಈಗಾಗಲೇ ವಿದೇಶಿಯ ರಿಂದ ಹಾಳಾಗಿದೆ. ಆದರೆ ಈ ಸ್ಥಳ ಹಾಳಾಗ ಬಾರದು. ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರು ದ್ವೀಪಕ್ಕೆ ಭೇಟಿ ನೀಡುವುದರಿಂದ ಅಲ್ಲಿ ಅಶ್ಲೀಲತೆಗೆ ಅವಕಾಶ ಕೊಡಬಾರದು ಎಂದು ಶಿರೂರು ಸ್ವಾಮೀಜಿ ತಿಳಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications