ರಾಮುಲು ಬಂಟ ಸೋಮಲಿಂಗಪ್ಪ ಮಾಡಿದ ಆಸ್ತಿ ಎಷ್ಟು..?

2004 ಮತ್ತು 2008ರ ಚುನಾವಣೆಯಲ್ಲಿ ಶಿರಗುಪ್ಪ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ ಯಾದ ಶ್ರೀರಾಮುಲು ಬಂಟ ಬಿಜೆಪಿ ಶಾಸಕ ಸೋಮಲಿಂಗಪ್ಪ ಅವರು ಆಸ್ತಿ ವಿವರ ಸಂಪೂರ್ಣವಾಗಿ ಬಹಿರಂಗವಾಗಿಲ್ಲ. ಬಹಿರಂಗಪಡಿಸಿದ ವಿವರಗಳು ಸುಳ್ಳು ಲೆಕ್ಕ ಹೇಳುತ್ತಿದೆ.
ಚುನಾವಣೆ ಆಯೋಗ ಮತ್ತು ಲೋಕಾಯುಕ್ತ ಸಂಸ್ಥೆಗೆ ನೀಡಿರುವ ಸುಳ್ಳು ಮಾಹಿತಿ ನೀಡಿದ್ದಾರೆ. 2004ರಲ್ಲಿ ಶಾಸಕರಾದ ನಂತರ ಅಕ್ರಮವಾಗಿ ಆಸ್ತಿಗಳಿಸಿದ್ದು, ಅವರು 63,59,333 ಲಕ್ಷ ರೂ. ನಷ್ಟು ಆದಾಯ ಮೀರಿದ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿ ಎಂದು ಈರಣ್ಣ ಎಂಬುವರು ಫೆ.2ರಂದು ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಸೋಮಲಿಂಗಪ್ಪ ಶಾಸಕ ಸ್ಥಾನವನ್ನು ದುರ್ಬಳಕೆ ಮಾಡಿ ಶಿರಗುಪ್ಪ ಸುತ್ತಮುತ್ತ 60 ಎಕರೆ ಸರಕಾರಿ ಭೂಮಿ ಕಬಳಿಸಿದ್ದಾರೆ. ಕಬಳಿಸಿದ ಭೂಮಿಯನ್ನು ತಮ್ಮ ಕುಟುಂಬ ಸದಸ್ಯರು ಹಾಗೂ ಹತ್ತಿರದ ಸಂಬಂಧಿಕರ ಹೆಸರಿಗೆ ಅಕ್ರಮ ವಾಗಿ ಕ್ರಯಪತ್ರ ಮಾಡಿಸಿದ್ದಾರೆ ಎಂದು ಈ ಈರಣ್ಣ ಅವರು ಆರೋಪಿಸಿದ್ದಾರೆ.
ಮಾರ್ಚ್ 31, 2011ಕ್ಕೆ ಸಲ್ಲುವಂತೆ ಲೋಕಾಯುಕ್ತಕ್ಕೆ ಸಲ್ಲಿಸಿದ ವಿವರ ಪ್ರಕಾರ 13,40,000 ಲಕ್ಷ ರು ಸ್ವಯಾರ್ಜಿತ ಹಾಗೂ ಕುಟುಂಬದ ಆಸ್ತಿ 76,99,333 ರು ಎಂದು ಘೋಷಿಸಲಾಗಿದೆ.
ಈ ವಿವರಗಳಲ್ಲಿ ಸಿರಗುಪ್ಪದಲ್ಲಿರುವ ಜಮೀನು, ನಿವೇಶನಗಳ ಮೌಲ್ಯ ಸೇರಿಸಿಲ್ಲ. ಜಮೀನಿನ ಮೌಲ್ಯ 9 ಲಕ್ಷ ರು ಎಂದು ಶಾಸಕರು ಹೇಳಿದ್ದಾರೆ. ಆದರೆ, ಅದರ ಮೌಲ್ಯ 45 ಲಕ್ಷ ರು ಮೀರುತ್ತದೆ.
ಕಾಂಗ್ರೆಸ್ ಶಾಸಕ ಕೃಷ್ಣಪ್ಪ, ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ನಂತರ ಸಿಟಿ ರವಿ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿತ್ತು. ಈಗ ಸೋಮಲಿಂಗಪ್ಪ ಸರದಿ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications