ರಾಜೀನಾಮೆ, ಈಗ ಸಿಎಂ ಸದಾನಂದರ ಸರದಿ
ಬೆಂಗಳೂರು,
ಫೆ.8: ಪ್ರತ್ಯೇಕವಾಗಿ ತನಿಖೆ ಮಾಡುವ ಅಗತ್ಯವಿಲ್ಲ. ಕೂಡಲೇ ಮೂವರು ಸಚಿವರನ್ನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನೈತಿಕ ಹೊಣೆ ಹೊತ್ತು ಸಿಎಂ ಸದಾನಂದ ಗೌಡರು ರಾಜೀನಾಮೆ ನೀಡಿ ವಿಧಾನಸಭೆ ವಿಸರ್ಜಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. id="toptextpromo">ಸರ್ಕಾರ
ತುಂಬ ಅಶ್ಲೀಲತೆ ತುಂಬಿ ತುಳುಕುತ್ತಿದೆ. ರೇವ್ ಪಾರ್ಟಿ ಪ್ರಕರಣ ಕಣ್ಮುಂದೆ ಇರುವಾಗಲೇ ಇಂಥ ಘಟನೆ ನಡೆದಿರುವುದು ಅಕ್ಷಮ್ಯ. ಮೂವರು ಸಚಿವರ ಶಾಸಕತ್ವದಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಆಗ್ರಹಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಈ
ನಡುವೆ ಸಹಕಾರ ಸಚಿವ ಲಕ್ಷ್ಮಣ ಸವದಿ, ಇತರ ಇಬ್ಬರು ಸಚಿವರುಗಳಾದ ಸಿಸಿ ಪಾಟೀಲ್ ಮತ್ತು ಕೃಷ್ಣ ಪಾಲೆಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಮೂವರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.ರಾಜೀನಾಮೆ ನೀಡಿದ ನಂತರ ಮೂವರು ಸಚಿವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ.











Click it and Unblock the Notifications