ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಸಿಬಿಐ ತನಿಖೆ?

|
Google Oneindia Kannada News

B S Yeddyurappa
ನವದೆಹಲಿ, ಫೆ 11: ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮತ್ತೆ ಕಾನೂನು ಕಂಟಕ ಶುರುವಾಗುವ ಎಲ್ಲ ಲಕ್ಷಣಗಳು ಎದುರಾಗುತ್ತಿವೆ. ಜಿಂದಾಲ್‌ ಸ್ಟೀಲ್‌ ಕಂಪೆನಿಯಿಂದ ತಮ್ಮ ಕುಟುಂಬದ ಪ್ರೇರಣಾ ಟ್ರಸ್ಟ್‌ಗೆ ಹಣ ಪಡೆದಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವ ಅಗತ್ಯವಿದೆಯೇ ಎಂದು ಪರಿಶೀಲಿಸಲು ಸುಪ್ರೀಂಕೋರ್ಟ್ ಸಿಇಸಿಗೆ ಆದೇಶ ನೀಡಿದೆ.

ಅಲ್ಲದೇ, ಅದಾನಿ ಎಂಟರ್‌ಪ್ರೈಸಸ್ ಮತ್ತು ಕೆಲ ಅಧಿಕಾರಿಗಳು ಭಾಗಿಯಾಗಿದ್ದಾರೆನ್ನಲಾದ ಬೇಲಿಕೇರಿ ಬಂದರಿನ ಅದಿರು ಕಣ್ಮರೆ ಪ್ರಕರಣದ ಬಗ್ಗೆ ಕೂಡಾ ಸಿಬಿಐ ತನಿಖೆ ನಡೆಸುವ ಅವಶ್ಯಕತೆ ಇದೆಯೇ ಎಂದು ಪರಿಶೀಲಿಸಿ ಎರಡು ವಾರದೊಳಗೆ ವರದಿ ಸಲ್ಲಿಸುವಂತೆ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಉನ್ನತಾಧಿಕಾರ ಸಮಿತಿಗೆ ಸೂಚಿಸಿದೆ.

ಅಕ್ರಮವಾಗಿ ಗಣಿ ಗುತ್ತಿಗೆ ಪಡೆಯಲು ಯಡಿಯೂರಪ್ಪ ಅವರ ಕುಟುಂಬಕ್ಕೆ ಸೇರಿದ ಪ್ರೇರಣಾ ಟ್ರಸ್ಟ್‌ಗೆ ಜಿಂದಾಲ್‌ ಸ್ಟೀಲ್‌ ಕಂಪೆನಿ 10 ಕೋಟಿ ರೂ. ಲಂಚ ನೀಡಿದೆ ಮತ್ತು ಅವರ ಕುಟುಂಬಕ್ಕೆ ಸೇರಿದ್ದ ಜಮೀನನನ್ನು ಅದರ ನೈಜ ಮೌಲ್ಯಕ್ಕಿಂತ ಹೆಚ್ಚಿನ ಬೆಲೆ ನೀಡಿ ಖರೀದಿಸಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಎಸ್ ಆರ್ ಹಿರೇಮಠ್ ಜ.16ರಂದು ಸರ್ವೋಚ್ಚಯ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

English summary
The Supreme Court on Friday directed the Central Empowerment Committee, which is looking into the illegal mining issue, to verify whether a Central Bureau of Investigation probe is necessary against former Karnataka [ Images ] chief minister B S Yeddyurappa
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X