ಸಜ್ಜನ ರಾಜಕಾರಣಿ ವಿ.ಎಸ್. ಆಚಾರ್ಯ ಹಠಾತ್ ನಿಧನ

ನಗರದ ನೃಪತುಂಗ ರಸ್ತೆಯಲ್ಲಿರುವ ಕಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸುತ್ತಿದ್ದಾಗ ವೇದಿಕೆಯಲ್ಲಿಯೇ ಅವರು ಕುಸಿದುಬಿದ್ದಿದ್ದರು. ಅವರನ್ನು ಕೂಡಲೆ ಕ್ರೆಸೆಂಟ್ ರಸ್ತೆಯಲ್ಲಿರುವ ಮಲ್ಲಿಗೆ ನರ್ಸಿಂಗ್ ಹೋಂಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಚಾರ್ಯ ಅವರು ತೀರಿಕೊಂಡಿದ್ದಾರೆ.
ವಿ.ಎಸ್. ಆಚಾರ್ಯ ಅವರು ಇಂದು ಮಧ್ಯಾಹ್ನವೇ ಮಂಗಳೂರಿನಿಂದ ವಿಮಾನದಲ್ಲಿ ಬೆಂಗಳೂರಿಗೆ ಮರಳಿದ್ದರು. ಅಲ್ಲಿಂದ ನೇರವಾಗಿ ಅವರು ಕಾರ್ಯಕ್ರಮಕ್ಕೆ ಬಂದಿದ್ದರು. ಅಲ್ಲಿ ವೇದಿಕೆ ಏರುವಾಗ ಕುಸಿದುಬಿದ್ದಿದ್ದಾರೆ. ಕೊನೆಗೆ ಮಧ್ಯಾಹ್ನ 1.15ರ ಸುಮಾರಿಗೆ ಅವರು ಅಸುನೀಗಿದರು. ಅವರ ಪಾರ್ಥೀವ ಶರೀರವನ್ನು ರೇಸ್‌ಕೋರ್ಸ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇಡಲಾಗಿತ್ತು. ಅಲ್ಲಿ ಅವರಿಗೆ ಸಕಲ ಸರಕಾರಿ ವಂದನೆ ಸಲ್ಲಿಸಲಾಯಿತು. ಎಲ್ಲ ರಾಜಕಾರಣಿಗಳು ಬಂದು ಅಂತಿಮ ನಮನ ಸಲ್ಲಿಸಿದರು. [ನೆನಪಿನ ಪುಟಗಳಲ್ಲಿ ವಿಎಸ್ ಆಚಾರ್ಯ]
ಗಣ್ಯರ ಕಂಬನಿ : ಆಚಾರ್ಯ ಅವರ ಸಾವು ಬಿಜೆಪಿ ಪಾಲಿಗೆ ತುಂಬಲಾರದ ನಷ್ಟ. ಅವರು ಎಲ್ಲ ರಾಜಕಾರಣಿಗಳಿಗೆ ಮಾರ್ಗದರ್ಶಿಗಳಾಗಿದ್ದರು. ಅವರ ಸ್ಥಾನವನ್ನು ತುಂಬುವುದು ಕಷ್ಟಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಮಲ್ಲಿಗೆ ಆಸ್ಪತ್ರೆಗೆ ಧಾವಿಸಿದ್ದಾರೆ.
ಉಡುಪಿಯಲ್ಲಿ ಅಂತ್ಯ ಸಂಸ್ಕಾರ : ಮಧ್ಯಾಹ್ನ ಆಚಾರ್ಯ ಅವರ ಪಾರ್ಥೀವ ಶರೀರವನ್ನು ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಕೊಂಡೊಯ್ಯಲಾಗುತ್ತಿದೆ. ಅಲ್ಲಿಂದ ರಸ್ತೆಯ ಮುಖಾಂತರ ಉಡುಪಿಗೆ ತೆಗೆದುಕೊಂಡು ಹೋಗಿ, ಬೈಲಕೆರೆಯಲ್ಲಿರುವ ಅವರ ಸ್ವಂತ ನಿವಾಸಕ್ಕೆ ಒಯ್ಯಲಾಗುವುದು. ನಂತರ ಫೆ.14ರ ಸಂಜೆ ಬೀಡಿನಗುಡ್ಡೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶೋಕಾಚರಣೆ : ಆಚಾರ್ಯ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ನಡೆಸಲು ರಾಜ್ಯ ಸರಕಾರ ನಿರ್ಣಯಿಸಿದೆ. ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಮಾಡಲಾಗಿದೆ. ಉಡುಪಿಯ ಡಿಸಿ ಕಚೇರಿ 'ರಜತಾದ್ರಿ'ಯಲ್ಲಿ ಸಂಜೆ 5ರಿಂದ 8ರವರೆಗೆ ಸಾರ್ವಜನಿಕರಿಗೆ ಆಚಾರ್ಯ ಅವರ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗುತ್ತಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications