ಕೃಷ್ಣಪ್ಪ,ಪ್ರಿಯಕೃಷ್ಣ ಮನೆ ಮೇಲೆ ಲೋಕಾಯುಕ್ತ ದಾಳಿ

ಎಂ ಕೃಷ್ಣಪ್ಪ ಅವರ ಪುತ್ರ, ಗೋವಿಂದರಾಜ ನಗರ ಶಾಸಕ ಪ್ರಿಯಕೃಷ್ಣ ಅವರ ಮನೆಯ ಮೇಲೂ ನಗರ ಲೋಕಾಯುಕ್ತ ಡಿವೈಎಸ್ಪಿ ಪೊನ್ನರಾಜು ನೇತೃತ್ವದ ಎರಡು ತಂಡಗಳು ಮುಂಜಾನೆ ದಾಳಿಯಿಟ್ಟಿವೆ. ಕೃಷ್ಣಪ್ಪ ಮತ್ತು ಪ್ರಿಯಕೃಷ್ಣ ಅವರ 2 ಮನೆ ಹಾಗೂ 2 ಕಚೇರಿಗಳನ್ನು ಶೋಧಿಸುತ್ತಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ 156 (3) ಕಲಮಿನ ಅಡಿ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಲೋಕಾಯುಕ್ತ ಪೊಲೀಸರಿಗೆ ಜನವರಿ 17ರಂದು ಆದೇಶಿಸಿದ್ದರು.
ರಾಜಾಜಿನಗರ ನಿವಾಸಿ ಎಚ್. ಸಿ.ಪ್ರಕಾಶ್ ಸಲ್ಲಿಸಿರುವ ಖಾಸಗಿ ದೂರು ಇದಾಗಿದೆ. ಕೃಷ್ಣಪ್ಪ, ಅವರ ಪುತ್ರ ಹಾಗೂ ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಪತ್ನಿ ಪ್ರಿಯದರ್ಶಿನಿ ಹಾಗೂ ಪುತ್ರ ಪ್ರದೀಪ್ ಇತರ ಆರೋಪಿಗಳು. ಇವರ ವಿರುದ್ಧವೂ ತನಿಖೆ ನಡೆದಿದೆ.












Click it and Unblock the Notifications