ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣಪ್ಪ,ಪ್ರಿಯಕೃಷ್ಣ ಮನೆ ಮೇಲೆ ಲೋಕಾಯುಕ್ತ ದಾಳಿ

By Srinath
|
Google Oneindia Kannada News

illegal-assets-lokayukta-police-raid mla-krishnappa
ಬೆಂಗಳೂರು, ಫೆ.16: ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ವಿಜಯನಗರ ಕಾಂಗ್ರೆಸ್ ಶಾಸಕ ಲೇಔಟ್ ಕೃಷ್ಣಪ್ಪ ಅವರ ವಿಜಯನಗರದ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಫೆ. 18ರ ಒಳಗಾಗಿ ತನಿಖಾ ವರದಿ ಸಲ್ಲಿಸುವಂತೆ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಎಂ ಕೃಷ್ಣಪ್ಪ ಅವರ ಪುತ್ರ, ಗೋವಿಂದರಾಜ ನಗರ ಶಾಸಕ ಪ್ರಿಯಕೃಷ್ಣ ಅವರ ಮನೆಯ ಮೇಲೂ ನಗರ ಲೋಕಾಯುಕ್ತ ಡಿವೈಎಸ್ಪಿ ಪೊನ್ನರಾಜು ನೇತೃತ್ವದ ಎರಡು ತಂಡಗಳು ಮುಂಜಾನೆ ದಾಳಿಯಿಟ್ಟಿವೆ. ಕೃಷ್ಣಪ್ಪ ಮತ್ತು ಪ್ರಿಯಕೃಷ್ಣ ಅವರ 2 ಮನೆ ಹಾಗೂ 2 ಕಚೇರಿಗಳನ್ನು ಶೋಧಿಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ 156 (3) ಕಲಮಿನ ಅಡಿ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಲೋಕಾಯುಕ್ತ ಪೊಲೀಸರಿಗೆ ಜನವರಿ 17ರಂದು ಆದೇಶಿಸಿದ್ದರು.

ರಾಜಾಜಿನಗರ ನಿವಾಸಿ ಎಚ್. ಸಿ.ಪ್ರಕಾಶ್ ಸಲ್ಲಿಸಿರುವ ಖಾಸಗಿ ದೂರು ಇದಾಗಿದೆ. ಕೃಷ್ಣಪ್ಪ, ಅವರ ಪುತ್ರ ಹಾಗೂ ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಪತ್ನಿ ಪ್ರಿಯದರ್ಶಿನಿ ಹಾಗೂ ಪುತ್ರ ಪ್ರದೀಪ್ ಇತರ ಆರೋಪಿಗಳು. ಇವರ ವಿರುದ್ಧವೂ ತನಿಖೆ ನಡೆದಿದೆ.

English summary
Illegal Assets Case- A private complaint is filed against Vijayanagar constituency Congress legislator M Krishnappa, his son Priya Krishna, MLA of Govindrajnagar constituency, and other family members in the Special Lokayukta Court. As a follow up Lokayukta police raided both MLAs Houses in Bangalore today (Feb 16)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X