ಸಹಪಾಠಿ ಮೇಲೆ ಶೂಟ್ ಮಾಡಿದ ವಿದ್ಯಾರ್ಥಿಗಳು
ಅಮೃತಸರ್,
ಫೆ.17: ಶಾಲಾ ವಿದ್ಯಾರ್ಥಿಗಳ ಜಗಳ ತಾರಕಕ್ಕೇರಿ, ಮೂವರು ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ಶುಕ್ರವಾರ ಬೆಳಗ್ಗೆ ನಡೆದಿದೆ. 11ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಶಾಲಾ ಆವರಣದಲ್ಲೇ ಶೂಟ್ ಮಾಡಿದ್ದಾರೆ. id="toptextpromo">ಗಾಯಗೊಂಡ
ಮೂವರು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಶೂಟ್ ಮಾಡಿದ ವಿದ್ಯಾರ್ಥಿಗಳ ಬಳಿ ಇದ್ದ ಪಿಸ್ತೂಲ್ ಸರಿಯಾಗಿ ಕಾರ್ಯ ನಿರ್ವಹಿಸಿದ್ದರಿಂದ ದಾಳಿಗೆ ಒಳಗಾದ ವಿದ್ಯಾರ್ಥಿಗಳು ಹೆಚ್ಚಿನ ಅಪಾಯವಿಲ್ಲದೆ ಬಚಾವಾಗಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಐವರು
ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು. ಮೊದಲಿಗೆ ಮೂವರನ್ನು ಬೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಲಾಯಿತು. ನಂತರ ಮೂವರು ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಲಾಯಿತು. ಆದರೆ ಗುರಿ ತಪ್ಪಿದ್ದ ನಂತರ ಸಣ್ಣ ಪುಟ್ಟ ಗಾಯಗಳೊಂದಿಗೆ ವಿದ್ಯಾರ್ಥಿಗಳು ಆಲ್ಲಿಂದ ಓಟಕಿತ್ತಿದ್ದಾರೆ. ಶೂಟೌಟ್ ಮಾಡಿದ ವಿದ್ಯಾರ್ಥಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.











Click it and Unblock the Notifications