ಫೆ.19ರಂದು ತಪ್ಪದೆ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ

ಐದು ವರ್ಷದೊಳಗಿನ 74,59,152 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಉದ್ದೇಶ ಇಲಾಖೆ ಇಟ್ಟುಕೊಂಡಿದೆ. ಸಾವಿರಾರು ಕಾರ್ಯಕರ್ತರು ರಾಜ್ಯದಾದ್ಯಂತ ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ತಲುಪಲು ಸಾಧ್ಯವಿಲ್ಲದ ಪ್ರದೇಶಗಳು ಹಾಗೂ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ ವಿಶೇಷ ಸಂಚಾರಿ ತಂಡಗಳು ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಮಣರೆಡ್ಡಿಯವರು ತಿಳಿಸಿದ್ದಾರೆ.
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಲು ವ್ಯವಸ್ಥಿತ ಪ್ರಚಾರ ಮಾಡಲಾಗುತ್ತಿದೆ. ಆಕಾಶವಾಣಿ, ದೂರದರ್ಶನ ಮತ್ತು ಇತರೆ ಖಾಸಗಿ ರೇಡಿಯೋ ಹಾಗೂ ಟಿವಿ ವಾಹಿನಿಗಳಲ್ಲಿ ಗಣ್ಯರ ಸಂದೇಶಗಳು, ನೇರ ಫೋನ್ ಇನ್ ಸಂದರ್ಶನ, ನಿರಂತರ ಪ್ರಕಟಣೆಗಳ ಮೂಲಕ ಪ್ರಚಾರ ಕಾರ್ಯ ಮಾಡಲಾಗುತ್ತದೆ. ಇದಲ್ಲದೆ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸ್ಥಳೀಯ ಸಂಸ್ಥೆಗಳು ರೋಟರಿ ಇಂಟರ್‌ನ್ಯಾಷನಲ್ ಸೇರಿದಂತೆ ಇತರ ಸ್ವಯಂ ಸೇವಾ ಸಂಸ್ಥೆಗಳು ಪಲ್ಸ್ ಪೊಲೀಯೋ ಲಸಿಕೆ ಕಾರ್ಯಕ್ರಮದ ಯಶಸ್ಸಿಗೆ ಕೈ ಜೋಡಿಸಿವೆ.
ಮೊದಲನೇ ಹಂತದ ಪೋಲಿಯೋ ಲಸಿಕೆ ಆಂದೋಲನಕ್ಕೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 8 ಗಂಟೆಗೆ ಆಯ್ದ ಕೆಲವು ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿರುತ್ತಾರೆ.
ರಾಜ್ಯದಲ್ಲಿ 2007ರ ನವೆಂಬರ್ 3ರಂದು ರಾಯಚೂರಿನಲ್ಲಿ ವರದಿಯಾದ ಪೋಲಿಯೋ ಪ್ರಕರಣವೇ ಕೊನೆಯದು. ಅದೂ ಸಹ ವಲಸೆ ಕುಟುಂಬವೊಂದರಲ್ಲಿ ಕಂಡುಬಂದಿದ್ದು, ರಾಜ್ಯದವರಲ್ಲಿಯೇ ಕಂಡುಬಂದ ಪೋಲಿಯೋ ಪ್ರಕರಣ ವರದಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ 2004ರಲ್ಲಿ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications