ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಸೂದೆಯಲ್ಲಿ ತಿದ್ದುಪಡಿ:ಗೋಹತ್ಯೆ ಬೇಡ,ಎಮ್ಮೆ ಹತ್ಯೆ ಓಕೆ

|
Google Oneindia Kannada News

ತುಮಕೂರು, ಫೆ 21: ಗೋಹತ್ಯೆ ನಿಷೇಧ ಶಾಸನಕ್ಕೆ ರಾಷ್ಟ್ರ ಮಟ್ಟದಲ್ಲಿ ಕೆಲವೊಂದು ರಾಜಕೀಯ ಪಕ್ಷಗಳ ಪ್ರಬಲ ವಿರೋಧವಿದ್ದರೂ, ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಕಾಯಿದೆಗೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪರೋಕ್ಷವಾಗಿ ಹಸಿರು ನಿಶಾನೆ ತೋರಿದ್ದಾರೆ. ಎಮ್ಮೆಯನ್ನು ಹೊರತು ಪಡಿಸಿ ವಿಧೇಯಕ ರೂಪಿಸಲು ರಾಷ್ಟ್ರಪತಿ ಸರಕಾರಕ್ಕೆ ಸಲಹೆ ನೀಡಿದ್ದಾರೆ.

ರಾಷ್ಟ್ರಪತಿಗಳ ಸಲಹೆಯ ಮೇರೆಗೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗುವುದು ಎಂದು ಸಿಎಂ ಸದಾನಂದ ಗೌಡ ತುಮಕೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಗೋಹತ್ಯೆ ನಿಷೇಧ ವಿಧೇಯಕ ರಾಷ್ಟ್ರಪತಿಗಳಿಂದ ರಾಜ್ಯಕ್ಕೆ ವಾಪಾಸ್ ಬಂದಿರುವುದು ನಿಜ. ಅವರ ಸಲಹೆ ಮೇರೆಗೆ ವಿಧೇಯಕದಲ್ಲಿ ತಿದ್ದುಪಡಿ ತಂದು ಈ ಬಜೆಟ್ ಅಧಿವೇಶನದಲ್ಲೇ ಮಂಡಿಸಲಾಗುವುದು ಎಂದು ಸಿಎಂ ಸ್ಪಷ್ಟ ಪಡಿಸಿದ್ದಾರೆ.

ಕರ್ನಾಟಕ ವಿಧಾನಮಂಡಲದಲ್ಲಿ ಅಂಗೀಕಾರ ಗೊಂಡಿರುವ ಗೋಹತ್ಯೆ ನಿಷೇಧ ವಿಧೇಯಕದಲ್ಲಿ ಎಮ್ಮೆ ಸೇರ್ಪಡೆಯಾಗಿದೆ. ಆದರೆ ಈ ವಿಧೇಯಕದಲ್ಲಿ ಉಲ್ಲೇಖವಾಗಿರುವ ಎಮ್ಮೆಯನ್ನು ಹೊರತುಪಡಿಸಿ ಈ ವಿಧೇಯಕ ತಿದ್ದುಪಡಿಯಾದರೆ ಒಳ್ಳೆಯದು ಎಂದು ಸಲಹೆ ನೀಡಿದ್ದೇವೆ ಎಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಹೇಳಿದ್ದಾರೆ.

ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಧೇಯಕವನ್ನು ಶಾಸನ ಸಭೆಯಲ್ಲಿ ಮಂಡಿಸಿದಾಗ ವಿಧೇಯಕದ ಪರವಾಗಿ ಕಾಂಗ್ರೆಸ್ ನ ಕೆಲ ಸದಸ್ಯರೂ ಸ್ವಾಗತಿಸಿದ್ದರು. ಹಿಂದೂಗಳಿಗೆ ಗೋಮಾತೆಯಾಗಿರುವ ಹಸುಗಳನ್ನು ಕೊಲ್ಲುವುದು ಪರಮಪಾಪ. ಹಸುಗಳನ್ನು ಕಾಪಾಡಲು ನಮ್ಮ ಸರಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.

English summary
CM Sadananda Gowda said, Cow slaughter ban bill will be presented in the current budget session. Some amendment will be taken place as per President suggestion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X