ಉಡುಪಿ ಉಪಸಮರ: ಜೆಡಿಎಸ್ ನಡೆ ಇನ್ನೂ ನಿಗೂಢ

udupi-chikmagalur-bypoll-jds-yet-to-announce-candidate
ಹಾಸನ, ಫೆ.22: ಪಕ್ಷೇತರ ಅಭ್ಯರ್ಥಿಯಾಗಿ 50 ವರ್ಷಗಳ ಹಿಂದೆ ರಾಜ್ಯ ವಿಧಾನಸಭೆಗೆ ಚುನಾಯಿತರಾದ ಜೆಡಿಎಸ್ ಸಾರಥಿ ಎಚ್ ಡಿ ದೇವೇಗೌಡರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಗೆ ಪಕ್ಷದ ನಡೆಯೇನು ಎಂಬುದನ್ನು ಇನ್ನೂ ನಿಗೂಢವಾಗಿಟ್ಟಿದ್ದಾರೆ. ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ 27 ರೊಳಗಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೌಡರು ಹೇಳಿದ್ದಾರೆ.

ಇದೇ ವೇಳೆ, 'ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಚುನಾವಣೆಯಲ್ಲಿ ಹೋರಾಡುತ್ತೇವೆ. ಇಲ್ಲದಿದ್ದರೆ ರಾಜ್ಯ ಪ್ರವಾಸ ಇತ್ಯಾದಿ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ ಎಂದೂ ಅಚ್ಚರಿ ಮೂಡಿಸಿದ್ದಾರೆ.

ಹಾಸನದಲ್ಲಿ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿ ಸಂಸ್ಕರಣಾ ಘಟಕವನ್ನು ಮಂಗಳವಾರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಆಯಾ ಜಿಲ್ಲಾ ಘಟಕದ ಮುಖಂಡರೊಂದಿಗೆ ಚರ್ಚಿಸಿ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಿದ್ದಾರೆ.

ಮೊದಲ ಹಂತದ 'ಜಯವಾಹಿನಿ' ರಾಜ್ಯ ಪ್ರವಾಸಕ್ಕೆ ನಾಡಿನ ಜನರಿಂದ ಉತ್ತಮ ಸಹಕಾರ, ಪ್ರೋತ್ಸಾಹ ಸಿಕ್ಕಿದೆ. ಇದೇ ರೀತಿ 2ನೆ ಹಂತದ ಪ್ರವಾಸ ಆರಂಭಿಸುವ ಬಗ್ಗೆ ಶೀಘ್ರವೇ ದಿನಾಂಕ ಪ್ರಕಟಿಸಲಾಗುವುದು. ಇದಲ್ಲದೆ 3ನೆ ಹಂತದ ಪ್ರವಾಸ ಸಹ ನಡೆಸಲಾಗುವುದು. ರಾಜ್ಯದ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡುವ ಮೂಲಕ ಬೇರೆ ಬೇರೆ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುವುದು ಎಂದು ದೇವೇಗೌಡರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+