ಮಧು, ಪೂಜಾಗಾಂಧಿ ಇಬ್ಬರೂ ಜೆಡಿಎಸ್ ಅಭ್ಯರ್ಥಿಯಲ್ಲ

ಈ ಕ್ಷೇತ್ರದಲ್ಲಿ ಈಗ ತ್ರಿಕೋಣ ಸ್ಪರ್ಧೆ ಏರ್ಪಟ್ಟಿದ್ದು ಬಿಜೆಪಿಯಿಂದ ಸುನಿಲ್ ಕುಮಾರ್, ಕಾಂಗ್ರೆಸ್ ನಿಂದ ಜಯಪ್ರಕಾಶ್ ಹೆಗ್ಡೆ ಸ್ಪರ್ಧೆಯಲ್ಲಿದ್ದಾರೆ. ಈ ಕ್ಷೇತ್ರವನ್ನು ಪಕ್ಷ ಗಂಭೀರವಾಗಿ ಪರಿಗಣಿಸಲಿದ್ದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಉತ್ತಮ ಪೈಪೋಟಿ ನೀಡುವ ಭರವಸೆಯನ್ನು ಹೊಂದಿದ್ದೇವೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಕ್ಷೇತ್ರದ ಮತದಾರರಿಗೆ ರಾಜ್ಯದಲ್ಲಿನ ಬಿಜೆಪಿ ಮತ್ತು ಕೇಂದ್ರದಲ್ಲಿನ ಕಾಂಗ್ರೆಸ್ ಪಕ್ಷದ ದುರಾಡಳಿತದ ಬಗ್ಗೆ ವಿವರಿಸಲಿದ್ದೇವೆ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ನಮ್ಮ ಕಾರ್ಯಕರ್ತರು ಪಣ ತೊಟ್ಟಿದ್ದಾರೆ. ನನ್ನ ಅಧಿಕಾರದ ಅವಧಿಯಲ್ಲಿ ರಾಜ್ಯ ಕಂಡ ಅಭಿವೃದ್ದಿಯನ್ನು ಮುಂದಿಟ್ಟು ಕೊಂಡು ಮತಯಾಚಿಸಲಿದ್ದೇವೆ ಎಂದು ಎಚ್ಡಿಕೆ ತಿಳಿಸಿದ್ದಾರೆ.
ಹೆಗ್ಡೆ ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇಂದು (ಫೆ 27) ನೂರಾರು ಮಂದಿ ಕಾರ್ಯಕರ್ತರ ಜೊತೆ ಆಗಮಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಎಂ. ಟಿ.ರೇಜು ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.












Click it and Unblock the Notifications