ಚುನಾವಣೆಗೆ ಪರಮೇಶ್ವರ ಸಾರಥ್ಯ:ಕಾಂಗ್ರೆಸ್ ಘೋಷಣೆ

ಮುಂಬರುವ ಸಾರ್ವತ್ರಿಕ ಚುನಾವಣೆ ಹಾಗೂ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ವಿಧಾನಸಭಾ ಚುನಾವಣೆ ಎದುರಾದರೆ ಅದನ್ನು ಎದುರಿಸಲು ಪಕ್ಷ ಶಕ್ತವಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಡಾ. ಪರಮೇಶ್ವರ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಯುವಕರು ಹಾಗೂ ಹೊಸ ಮುಖಗಳಿಗೆ ಕಾಂಗ್ರೆಸ್ ಆದ್ಯತೆ ನೀಡಲಿದೆ ಎಂದು ನಗರದ ಶಿವಗಿರಿಯಲ್ಲಿರುವ ಮಾಜಿ ಶಾಸಕ ವಿನಯ ಕುಲಕರ್ಣಿ ನಿವಾಸದಲ್ಲಿ ಸೋಮವಾರ ಬೆಳಿಗ್ಗೆ ಉಪಹಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಖರ್ಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಕೇಂದ್ರ ಸರ್ಕಾರದಲ್ಲಿರುವ ಕರ್ನಾಟಕದ ಮಂತ್ರಿಗಳಿಗೆ ಹೈಕಮಾಂಡ್ ಕೆಲವು ಜವಾಬ್ದಾರಿ ವಹಿಸಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುವಂತೆ ಸೂಚನೆ ನೀಡಿದೆ. ಅದಕ್ಕಾಗಿ ಈಗಿನಿಂದಲೇ ರಾಜ್ಯಾದ್ಯಂತ ಕಾರ್ಯಕರ್ತರ ಸಮಾವೇಶ ನಡೆಸಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದು ಖರ್ಗೆ ಹೇಳಿದರು.












Click it and Unblock the Notifications