ದಕ್ಷಿಣಭಾರತದ ಜನತೆಗೆ ಇಂದಿನಿಂದ ಗ್ಯಾಸ್ ಟ್ರಬಲ್ ಶುರು

ಈ ಬಗ್ಗೆ ದಕ್ಷಿಣ ವಲಯ ಮೋಟರ್ ಟ್ರಾನ್ಸ್ಪೋರ್ಟರ್ ವೆಲ್ಫೇರ್ ಅಸೋಷಿಯೇಷನ್ ಪ್ರಧಾನ ಕಾರ್ಯದರ್ಶಿ ಷಣ್ಮುಗಪ್ಪ ಮಾತನಾಡಿ, ಬುಧವಾರ ಮಧ್ಯರಾತ್ರಿಯಿಂದ ಮಂಗಳೂರು ಬಂದರಿನಿಂದ ಅಡುಗೆ ಅನಿಲ ಸರಬರಾಜು ಮಾಡುವ ಸುಮಾರು 3600ಕ್ಕೂ ಹೆಚ್ಚು ಟ್ಯಾಂಕರ್ ಲಾರಿಗಳು ಸಾಗಣೆ ಸ್ಥಗಿತಗೊಳಿಸಲಿವೆ. ಹಾಗಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೆ ಅಡುಗೆ ಅನಿಲ ಸರಬರಾಜು ಆಗುವುದಿಲ್ಲ. ಕರ್ನಾಟಕಕ್ಕೆ ನಮ್ಮ ಲಾರಿಗಳು ಪ್ರತಿದಿನ ಸುಮಾರು 10 ಸಾವಿರ ಟನ್ ಗ್ಯಾಸ್ ಸರಬರಾಜು ಮಾಡುತ್ತಿವೆ. ನಮ್ಮ ಬೇಡಿಕೆಗಳು ಈಡೇರುವ ತನಕ ಮುಷ್ಕರ ಕೈಬಿಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಲಾರಿ ಮಾಲೀಕರ ಈ ಮುಷ್ಕರದಿಂದಾಗಿ ತೊಂದರೆ ಸೃಷ್ಟಿಯಾಗುವ ಸಾದ್ಯತೆ ದಟ್ಟವಾಗಿದೆ. ನಗರದಲ್ಲಿ ಅಡುಗೆ ಅನಿಲ ವಿತರಿಸುವ ಇಂಡಿಯನ್ ಆಯಿಲ್, ಎಚ್ಪಿ ಮತ್ತು ಭಾರತ್ ಗ್ಯಾಸ್ ಕಂಪನಿ ತಲಾ ಒಂದೊಂದು ಶೇಖರಣೆ ಮತ್ತು ರೀಫಿಲ್ಲಿಂಗ್ ಘಟಕಗಳನ್ನು ಹೊಂದಿವೆ.
ಇಂಡಿಯನ್ ಗ್ಯಾಸ್ ಕಂಪನಿ ಮಾಲೂರಿನ ದೇವನಗುಂಡಿಯಲ್ಲಿ ತನ್ನ ಘಟಕ ಹೊಂದಿದ್ದರೆ, ಹಿಂದುಸ್ತಾನ್ ಪೆಟ್ರೋಲಿಯಂ ಮಹದೇವಪುರದಲ್ಲಿ ಮತ್ತು ಭಾರತ್ ಗ್ಯಾಸ್ ನೆಲಮಂಗಲದಲ್ಲಿ ಸಂಗ್ರಹಣಾ ಘಟಕ ಹೊಂದಿವೆ. ಅದರಲ್ಲಿ ಭಾರತ್ ಮತ್ತು ಎಚ್ಪಿ ಸಂಪೂರ್ಣವಾಗಿ ರಸ್ತೆಯನ್ನೇ ಅವಲಂಬಿಸಿಕೊಂಡಿದೆ. ಐಓಸಿ ಮಾತ್ರ ಅಡುಗೆ ಅನಿಲ ಸರಬಾರಾಜಿಗೆ ರೈಲನ್ನು ಹೆಚ್ಚು ಅವಲಂಬಿಸಿಕೊಂಡಿದೆ. ಹೀಗಾಗಿ, ಲಾರಿ ಮುಷ್ಕರ ಎಚ್ಪಿ ಮತ್ತು ಭಾರತ್ ಗ್ಯಾಸ್ ಕಂಪನಿ ಗ್ರಾಹಕರನ್ನು ಹೆಚ್ಚು ಬಾಧಿಸಲಿವೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications