ಪೊಲೀಸ್ ಔಟ್ ಪೋಸ್ಟ್ ಗೆ ಬೆಂಕಿ ಹಚ್ಚಿದ ವಕೀಲರು

ನಂತರ ಕೋರ್ಟ್ ಆವರಣದಲ್ಲಿ ನಿಲ್ಲಿಸಲಾಗಿದ್ದ ಸುಮಾರು 7 ರಿಂದ 8 ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ವಕೀಲರು ಬೆಂಕಿ ಹಚ್ಚುವ ದೃಶ್ಯಗಳನ್ನು ಸಾರ್ವಜನಿಕರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಡಿಸಿಪಿ ರಮೇಶ್ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದೆಲ್ಲೆಡೆ ಪ್ರತಿಭಟನೆ: ವಕೀಲರ ಗೂಂಡಾವರ್ತನೆಯನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ಹಾಗೂ ಸಾರ್ವಜನಿಕರು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ, ದಾವಣಗೆರೆ,ನೆಲಮಂಗಲ, ರಾಯಚೂರು ಮುಂತಾದೆಡೆ ಪ್ರತಿಭಟನೆ ಮುಂದುವರೆದಿದೆ.












Click it and Unblock the Notifications