ವಕೀಲರ ಪುಂಡಾಟ, ಕಾಣದ 'ಕೈ'ವಾಡ: ಯಡ್ಡಿ

BS Yeddyurappa
ಬೆಂಗಳೂರು, ಮಾ.4: ನ್ಯಾಯಾಲಯದ ಆವರಣದಲ್ಲಿ ನ್ಯಾಯವಾದಿಗಳು ಆ ಪರಿ ರೊಚ್ಚಿಗೇಳಲು ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ವಕೀಲರ ಪುಂಡಾಟಿಕೆಯಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ, ಈ ಘಟನೆ ಹಿಂದೆ ಕಾಣದ ಕೈಗಳ ಪಿತೂರಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರ ಮೇಲೆ ಹಲ್ಲೆ ಮಾಡುವುದು ಹೀನ ಕೃತ್ಯ.ಘಟನೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಸಂಚು ನಡೆಸುವ ಒಂದು ಗುಂಪು ಮೊದಲಿನಿಂದಲೂ ಈ ರೀತಿ ಕೆಲಸದಲ್ಲಿ ನಿರತವಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನಾನು ಅಧಿಕಾರದಲ್ಲಿದ್ದಾಗಲೂ ಈ ರೀತಿ ಗಲಭೆ, ಗಲಾಟೆ ನಡೆಸುವವರನ್ನು ಕಂಡಿದ್ದೇನೆ. ಆದರೆ, ಬಿಜೆಪಿ ಸರ್ಕಾರ ಹಿಂದಿನ ಯಾವ ಸರ್ಕಾರಗಳು ಕೈಗೊಳ್ಳದ ಕಠಿಣ ಕ್ರಮ ಕೈಗೊಂಡಿದೆ.

ಯಾರು ತಪ್ಪು ಮಾಡಿದ್ದರೂ ಶಿಕ್ಷೆ ಖಚಿತ. ಮಾಧ್ಯಮಗಳು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸುವ ರೀತಿ ವಾತಾವರಣ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಯಡಿಯೂರಪ್ಪ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+