ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ

ಇಂದಿರಾನಗರದ ಸಮೀಪ ಬೆನ್ನಿಗಾನಹಳ್ಳಿಯಲ್ಲಿ ಸರ್ವೆ ನಂಬರ್ 20ರ 4.20 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದಾರೆ ಎಂದು ಆರೋಪಿಸಿ, ಅಬ್ರಹಾಂ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ(ಮಾ.5) ಖಾಸಗಿ ದೂರು ಸಲ್ಲಿಸಿದ್ದರು.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಶಿವಕುಮಾರ್ ಅವರು ಶ್ರೀನಿವಾಸನ್ ಹೆಸರಿನಲ್ಲಿ ಅರ್ಜಿ ಸಲ್ಲಿಸಿ, ಬೆನ್ನಿಗಾನಹಳ್ಳಿಯ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಮನವಿ ಮಾಡಿದ್ದರು.
ಈ ಅರ್ಜಿಯನ್ನು ಮಾನ್ಯ ಮಾಡಿದ್ದ ಯಡಿಯೂರಪ್ಪ, 4.20 ಎಕರೆ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟು 2010ರ ಮೇ 13ರಂದು ಆದೇಶ ಹೊರಡಿಸಿದ್ದರು.
NGEF ವಸತಿ ಬಡಾವಣೆ ನಿರ್ಮಾಣಕ್ಕೆ ಬಿಡಿಎ ಈ ಭೂಮಿಯನ್ನು 1986ರಲ್ಲಿ ಗುರುತಿಸಿತ್ತು.












Click it and Unblock the Notifications