ಯಡಿಯೂರಪ್ಪ ಭವಿಷ್ಯ ಮಾ.16ರಂದು ನಿರ್ಧಾರ

ಅಕ್ರಮ ಗಣಿಗಾರಿಕೆ ಆರೋಪ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಆದರೆ, ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ಈಗ ಕೇಂದ್ರ ಉನ್ನತಾಧಿಕಾರಿಗಳ ಸಮಿತಿ ನೀಡುವ ವರದಿ ಮೇಲೆ ಅವಲಂಬಿತವಾಗಿದೆ.
ಮಾ.16 ರಂದು ಜಿಂದಾಲ್ ಕಂಪನಿಯಿಂದ ಯಡಿಯೂರಪ್ಪ ಪಡೆದಿರುವ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯ ಸಿಬಿಐ ತನಿಖೆಗೆ ಮನವಿ ಮಾಡಿರುವ ಅರ್ಜಿ ವಿಚಾರಣೆ ನಡೆಯಲಿದೆ.
ಮಾ.16 ರಂದು ಸಿಇಸಿ ಸಲ್ಲಿಸಲಿರುವ ವರದಿಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಸಿಬಿಐ ತನಿಖೆ ಅಗತ್ಯವಿದೆ ಎಂದಿದ್ದರೆ, ಯಡ್ಡಿ ಸಿಎಂ ಆಗಲು ಸಾಧ್ಯವಾಗುವುದಿಲ್ಲ. ಸುಪ್ರೀಂಕೋರ್ಟ್ ನಲ್ಲಿ ಸಿಜೆ ಕಪಾಡಿಯಾ, ಜಸ್ಟೀಸ್ ಅಫ್ತಾಬ್ ಅಲಂ ಹಾಗೂ ಜಸ್ಟೀಸ್ ಸ್ವತಂತ್ರ ಕುಮಾರ್ ನೇತೃತ್ವದ ಹಸಿರು ಪೀಠ ಸಿಇಸಿ ವರದಿ ಆಧಾರದ ಮೇಲೆ ತೀರ್ಪು ನೀಡಲಿದೆ.
ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ್ ಅವರು ಯಡಿಯೂರಪ್ಪ, ಜಿಂದಾಲ್, ಸೌತ್ ವೆಸ್ಟ್ ಮೈನಿಂಗ್ ಕಂಪನಿ ವಿರುದ್ಧ ಆರೋಪ ಹೊರೆಸಿ ದಾಖಲೆಗಳನ್ನು ಸಿಇಸಿಗೆ ಒದಗಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ಅಣ್ಣಾ ಟೀಂನ ಪ್ರಮುಖ ಸದಸ್ಯ ಪ್ರಶಾಂತ್ ಭೂಷಣ್ ವಾದಿಸುವ ನಿರೀಕ್ಷೆಯಿದೆ.












Click it and Unblock the Notifications