ಗುಪ್ತಚರ ಇಲಾಖೆ ಎಚ್ಚರ: ನಗರದಲ್ಲಿಂದು ನಿಷೇಧಾಜ್ಞೆ

Jyoti Prakash Mirji
ಬೆಂಗಳೂರು, ಮಾ 9: ವಕೀಲರು ಶುಕ್ರವಾರ (ಮಾ. 9) ಭಾರೀ ಪ್ರತಿಭಟನೆ ನಡೆಸಿ ಹೈಕೋರ್ಟ್ ಮುತ್ತಿಗೆ ಹಾಕುವ ಕಾರ್ಯಕ್ರಮ ಇಟ್ಟುಕೊಂಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ವಿವಿಧೆಡೆ ನಿಷೇಧಾಜ್ಞೆ ಜಾರಿಗೊಳಿಸಿ ಪೋಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ನಗರದ ಸಿಟಿ ಸಿವಿಲ್ ಕೋರ್ಟ್, ಸೆಷನ್ಸ್ ನ್ಯಾಯಾಲಯದ ಆವರಣದಿಂದ ಮೆರವಣಿಗೆಯಲ್ಲಿ ಆಗಮಿಸಿ ಹೈಕೋರ್ಟ್ ಗೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ವಕೀಲರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಸಮಾಜಘಾತುಕ ಶಕ್ತಿಗಳು, ಕಿಡಿಗೇಡಿಗಳು ಪ್ರತಿಭಟನೆಯನ್ನು ದುರುಪಯೋಗ ಪಡಿಸಿಕೊಂಡು ಸಾರ್ವಜನಿಕ ಆಸ್ತಿಪಾಸ್ತಿ ಗಳಿಗೆ ಹಾನಿ ಉಂಟು ಮಾಡುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿರುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಪೋಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಹೇಳಿಕೆ ನೀಡಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಬರುವ ಅಶೋಕ್ ನಗರ, ಹಲಸೂರು ಗೇಟ್, ಎಸ್ ಜೆ ಪಾರ್ಕ್, ಎಸ್ ಆರ್ ನಗರ, ಕಬ್ಬನ್ ಪಾರ್ಕ್, ವಿಧಾನಸೌಧ, ಹೈಗ್ರೌಂಡ್ಸ್, ಚಿಕ್ಕಪೇಟೆ, ಉಪ್ಪಾರಪೇಟೆ, ಸಿಟಿ ಮಾರ್ಕೆಟ್ ಪೋಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಮಿರ್ಜಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ನಡೆಸುವುದು, ದೈಹಿಕ ಹಿಂಸೆ ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದು ಮುಂತಾದ ಕೆಲವು ಕಾನೂನನ್ನು ಪಾಲಿಸ ಬೇಕಾಗುತ್ತದೆ ಎಂದು ಮಿರ್ಜಿ ಹೇಳಿಕೆ ನೀಡಿದ್ದಾರೆ.

ತಮಿಳುನಾಡಿನ ಕೊಯಂಬುತ್ತೂರಿನಿಂದ ಎಸ್ ಟಿ ಎಫ್ ಪಡೆಯನ್ನು ಕರೆಸಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+