ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಖಿಲೇಶ್ ಯಾದವ್

Akhilesh Yadav
ಲಖನೌ, ಮಾ. 10 : ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಮಗ, ಉತ್ತರ ಪ್ರದೇಶ ಚುನಾವಣಾ ಜಯದ ರೂವಾರಿ ಅಖಿಲೇಶ್ ಯಾದವ್ (38) ಅವರು ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಉತ್ತರಪ್ರದೇಶದ ಅತ್ಯಂತ ಕಿರಿಯ ವಯಸ್ಸಿನ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಲಿದ್ದಾರೆ.

ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಆಗುತ್ತಾರೋ, ಅಥವಾ ಅಖಿಲೇಶ್ ಯಾದವ್ ಆಗುತ್ತಾರೋ ಎಂಬ ಊಹಾಪೋಹಕ್ಕೆ ಕೊನೆಗೂ ತೆರೆಬಿದ್ದಿದೆ. ಶನಿವಾರ 11 ಗಂಟೆಗೆ ನಡೆದ ಸಮಾಜವಾದಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅಖಿಲೇಶ್ ಯಾದವ್ ಅವರ ಹೆಸರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಪ್ರಸ್ತಾಪಿಸಲಾಯಿತು ಮತ್ತು ಸರ್ವಾನುಮತದಿಂದ ಅಂಗೀಕಾರವಾಯಿತು.

ಅಖಿಲೇಶ್ ಅವರಿಗೆ ರಾಜಕೀಯದಲ್ಲಿ ಅಷ್ಟೊಂದು ಅನುಭವವಿಲ್ಲದ ಕಾರಣ ಅವರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಹಿರಿಯ ನಾಯಕ ಆಜಂ ಖಾನ್ ಮತ್ತಿತರರು ಸಮ್ಮತಿ ವ್ಯಕ್ತಪಡಿಸಿರಲಿಲ್ಲ. ಆದರೆ, ಮುಲಾಯಂ ಅವರು ಆಜಂ ಅವರ ಮನವೊಲಿಸಿದ ಮೇಲೆ ಎಲ್ಲವೂ ಸುಗಮವಾಯಿತು. ಸೋಮವಾರ, ಮಾ. 12ರಂದು ಅಖಿಲೇಶ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಹೊಡೆದಾಟ, ಒಬ್ಬನ ಸಾವು : ಅಖಿಲೇಶ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಮೊದಲು, ಉತ್ತರ ಪ್ರದೇಶದ ಅನೇಕ ಕಡೆಗಳಲ್ಲಿ ಸಮಾಜವಾದಿ ಪಕ್ಷ ಮತ್ತು ಸೋತಿರುವ ಬಹುಜನ ಸಮಾಜವಾದಿ ಪಕ್ಷದ ನಡುವೆ ಭಾರೀ ಮಾರಾಮಾರಿಗಳಾಗಿದ್ದು, ಒಬ್ಬ ಮೃತಪಟ್ಟಿದ್ದಾನೆ ಮತ್ತು ಹಲವರು ಗಾಯಗೊಂಡಿದ್ದಾರೆ. ಚುನಾವಣೆಯಾದ ನಂತರ ಇಲ್ಲಿಯವರೆಗೆ 7 ವರ್ಷದ ಬಾಲಕ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+