ಕುಂದಾಪುರದಲ್ಲಿ ಗೋಲ್ಡನ್ ಗರ್ಲ್ ರಮ್ಯಾ ಭರ್ಜರಿ ರೋಡ್ ಶೋ
ಕುಂದಾಪುರ,
ಮಾ 15: ಉಪಚುನಾವಣೆಯ ಪ್ರಚಾರದ ಆಖಾಡಕ್ಕೆ ನಟಿ ರಮ್ಯಾ ಧುಮುಕಿದ್ದಾರೆ. ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಪರ ರಮ್ಯಾ ಕುಂದಾಪುರದಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದ್ದಾರೆ. id="toptextpromo">ಕಾಂಗ್ರೆಸ್
ಒಂದು ರಾಷ್ಟ್ರೀಯ ಪಕ್ಷವಾಗಿದೆ ಮತ್ತು ಜಾತ್ಯಾತೀತ ನಿಲುವಿಗೆ ಬದ್ದವಾಗಿದೆ. ನಮ್ಮ ಪಕ್ಷ ಮಹಿಳೆಯರಿಗೆ ಗೌರವ ಮತ್ತು ಉತ್ತಮ ಸ್ಥಾನಮಾನ ನೀಡುತ್ತಿದೆ. ಇದರಿಂದ ಆಕರ್ಷಿತಳಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ನಾನು ಪಕ್ಷದಲ್ಲಿ ಯಾವುದೇ ಸ್ಥಾನಮಾನ ಬಯಸಿ ಬಂದವಳಲ್ಲ, ಆದರೆ ಅದು ತಾನಾಗಿಯೇ ಒಲಿದು ಬಂದರೆ ಸಮರ್ಥವಾಗಿ ನಿಭಾಯಿಸಬಲ್ಲೆ ಎಂದು ರಮ್ಯಾ ಈ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಯುವಶಕ್ತಿ
ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರಿಸಿ ಭಾರೀ ಅಂತರದಿಂದ ನಮ್ಮ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಗೆಲ್ಲಿಸಿ ಎಂದು ರಮ್ಯಾ ಮತದಾರರಲ್ಲಿ ವಿನಂತಿಸಿ ಕೊಂಡಿದ್ದಾರೆ. ಕಾಂಗ್ರೆಸ್ ನಾಯಕರಾದ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ರಮಾನಾಥ ರೈ, ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮೊದಲಾದವರು ರಮ್ಯಾ ಜೊತೆ ಭಾಗವಹಿಸಿ ಮತಯಾಚಿಸಿದರು.











Click it and Unblock the Notifications