ಉಡುಪಿ ಚುನಾವಣೆ: ಈ ಬಾರಿ ಅಚ್ಚರಿ ಫಲಿತಾಂಶ!!

ಕಳೆದ ಎರಡು ದಿನಗಳಿಂದ ಕಾರ್ಕಳ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ ಮತ್ತು ಬದಲಾವಣೆಯನ್ನು ಬಯಸುತ್ತಿದ್ದಾರೆ. ಕಳೆದ ಮೂರುವರೆ ವರ್ಷದಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸಿದ ಹಗರಣಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತದೆ, ಕಾಂಗ್ರೆಸ್ ಸಮರ್ಥವಾದ ವಿರೋಧಪಕ್ಷವಾಗಿ ಕಾರ್ಯ ನಿರ್ವಹಿಸಲಿಲ್ಲ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಎಚ್ಡಿಕೆ, ಮುಖ್ಯವಾಗಿ ಯುವ ಸಮುದಾಯ ಜೆಡಿಎಸ್ ಪರವಾಗಿದೆ. ಈ ಕ್ಷೇತ್ರದ ಫಲಿತಾಂಶದ ಮೂಲಕ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೂಕ್ತ ಸಂದೇಶ ರವಾನಿಸಲಿದ್ದೇವೆ. ಆರ್ಥಿಕ ಅನುದಾನ ಸಿಕ್ಕಿದ ಮೇಲೂ ಈ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳು ನೆನೆಗುದಿಗೆ ಬಿದ್ದಿವೆ. ಕಾರ್ಕಳದಲ್ಲಿನ ಹೊಸ ಬಸ್ ನಿಲ್ದಾಣ ಯಾವುದೇ ಪ್ರಯೋಜನಕ್ಕೆ ಬರುವಂತದಲ್ಲ ಎಂದು ಟೀಕಿಸಿದ್ದಾರೆ.
ಬಿಜೆಪಿ ಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂಧಿಸುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಮತದಾರರೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮಧು ಬಂಗಾರಪ್ಪ, ಯು ಆರ್ ಸಭಾಪತಿ, ಜೆಡಿಎಸ್ ಜಿಲ್ಲಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.












Click it and Unblock the Notifications