ರೆಡ್ಡಿ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು,
ಮಾ.16 : ಅಕ್ರಮ ಗಣಿ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ತಮ್ಮನ್ನು ಸಿಬಿಐ ಪೊಲೀಸ್ ಬಂಧನಕ್ಕೆ ನೀಡಿದ ಸಿಬಿಐ ನ್ಯಾಯಾಲಯ ಆದೇಶ ಪ್ರಶ್ನಿಸಿ ಮಾಜಿ ಸಚಿವ ಜನಾರ್ದನ ರೆಡ್ಡಿ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ. id="toptextpromo">ಅಕ್ರಮ
ಗಣಿ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಹೈದರಾಬಾದ್‌ನ ಚಂಚಲ ಗೂಡ ಜೈಲಿನಿಂದ ಕರೆತಂದಿದ್ದ ಸಿಬಿಐ ಪೊಲೀಸರು, ಮಾ.2ರಂದು ನಗರದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ರೆಡ್ಡಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾ.16ರವರೆಗೆ ಸಿಬಿಐ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶಿಸಿತ್ತು. id='are-slot-1' class='oiad oi-axt oiadv'> id='top-searched-articles'>ಇದನ್ನು
ಪ್ರಶ್ನಿಸಿದ್ದ ರೆಡ್ಡಿ , ಸಿಬಿಐ ನ್ಯಾಯಾಲಯದ ಆದೇಶ ರದ್ದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿದ್ದರು. ಈ ಸಂಬಂಧ ಗುರುವಾರ ವಾದ-ಪ್ರತಿವಾದ ಆಲಿಸಿದ ನ್ಯಾ.ಎನ್.ಆನಂದ ಅವರ ಏಕ ಸದಸ್ಯ ಪೀಠ ತೀರ್ಪು ಕಾಯ್ದಿರಿಸಿತು.











Click it and Unblock the Notifications