ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿ ಕ್ಷೇತ್ರದಲ್ಲಿ ಸಿಕ್ಕಾಪಟ್ಟೆ ಹಣಹಂಚಿದ ಕಾಂಗ್ರೆಸ್

|
Google Oneindia Kannada News

K S Eshwarappa & Veerappa Moily
ಬೆಂಗಳೂರು, ಮಾ 17: ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಶತಾಯುಗತಾಯು ಗೆಲ್ಲಲು ಕಾಂಗ್ರೆಸ್ ಅಡ್ಡದಾರಿ ಹಿಡಿದಿದೆ. ಮತದಾರರಿಗೆ ಹೇರಳವಾಗಿ ಹಣ ಹಂಚಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಆರೋಪ ಮಾಡಿದ್ದಾರೆ.

ಕೇಂದ್ರ ಸಚಿವರೆನ್ನುವುದನ್ನು ಮೆರೆತು ವೀರಪ್ಪ ಮೊಯ್ಲಿ ಕಾರ್ಕಳದಲ್ಲೇ ಠಿಕಾಣಿ ಹೂಡಿದ್ದಾರೆ. ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದೆ. ಇವರು ಏನೇ ಪ್ರಯತ್ನ ಪಟ್ಟರೂ ಇಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಕ್ಷೇತ್ರದ ಬಹಿರಂಗ ಪ್ರಚಾರಕ್ಕೆ ಶುಕ್ರವಾರ (ಮಾ 16) ತೆರೆಬಿದ್ದಿದೆ. ಮೂರೂ ರಾಜಕೀಯ ಪಕ್ಷಗಳು ಮನೆಮನೆಗೆ ತೆರಳಿ ಮತಯಾಚಿಸುತ್ತುದ್ದಾರೆ. ಚುನಾವಣಾ ನೀತಿಸಂಹಿತೆಯ ಪ್ರಕಾರ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದ ನಂತರ ಕ್ಷೇತ್ರದ ಹೊರಗಿನ ನಾಯಕರು, ಕಾರ್ಯಕರ್ತರು ಕ್ಷೇತ್ರ ಬಿಟ್ಟು ತೆರಳಬೇಕಾಗುತ್ತದೆ.

ನಾಳೆ ಭಾನುವಾರ ( ಮಾ 18) ಮತದಾನ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮೂವರು ಅಭ್ಯರ್ಥಿಗಳು ಸೇರಿದಂತೆ ಕಣದಲ್ಲಿ ಒಟ್ಟು 14 ಅಭ್ಯರ್ಥಿಗಳಿದ್ದಾರೆ. ಮಾ.21ಕ್ಕೆ ಚುನಾವಣಾ ಫ‌ಲಿತಾಂಶ ಹೊರಬೀಳಲಿದೆ.

English summary
BJP state president K S Eshwarappa said, Congress distributed money to voters in Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X