ಗಣಿಗಾರಿಕೆ: 20ರಂದು ಯಡ್ಡಿಗೆ ಏನು ಕಾದಿದೆಯೋ?
ನವದೆಹಲಿ,
ಮಾ.18: ಇತ್ತ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶತಾಯಗತಾಯ ಸದಾನಂದರನ್ನು ಮುಖ್ಯಮಂತ್ರಿ ಪಟ್ಟದಿಂದ ಇಳಿಸಲು ಅಹಿರ್ನಿಶಿ ಹೋರಾಡುತ್ತಿರುವಾಗಲೇ ಅಕ್ರಮ ಗಣಿಗಾರಿಕೆ ಕುರಿತು ಕೇಂದ್ರ ಉನ್ನತಾಧಿಕಾರ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಬುಲಾವ್ ನೀಡಿದೆ. ಜತೆಗೆ ಅದಾನಿ ಎಂಟರ್‌ಪ್ರೈಸಸ್‌ಗೆ ನೋಟಿಸ್ ನೀಡಲಾಗಿದೆ. id="toptextpromo">ಮಾರ್ಚ್
20ರಂದು ಮಂಗಳವಾರ ವೈಯಕ್ತಿಕವಾಗಿ, ಇಲ್ಲವೇ ಅಧಿಕೃತ ಪ್ರತಿನಿಧಿ ಮೂಲಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಮಾಜಿ ಮುಖ್ಯಮಂತ್ರಿಗೆ ಸೂಚಿಸಲಾಗಿದೆ. ಜೆಎಸ್‌ಡಬ್ಲ್ಯು ಹಾಗೂ ಎಸ್‌ಡಬ್ಲ್ಯುಎಂಸಿ ಕಂಪನಿಯಿಂದ ದೇಣಿಗೆ ಪಡೆದ ಆರೋಪ ಯಡಿಯೂರಪ್ಪ ಮೇಲಿದೆ. ಉತ್ತರ ಕನ್ನಡದ ಬೇಲಿಕೇರಿ ಬಂದರಿನಲ್ಲಿ ವಶಪಡಿಸಿಕೊಳ್ಳಲಾಗಿದ್ದ 5.5 ಲಕ್ಷ ಟನ್ ಅದಿರನ್ನು ಕಳವು ಮಾಡಿ ರಫ್ತು ಮಾಡಿದ ಆರೋಪವನ್ನು ಅದಾನಿ ಎಂಟರ್‌ಪ್ರೈಸಸ್ ಎದುರಿಸುತ್ತಿದೆ. id='are-slot-1' class='oiad oi-axt oiadv'> id='top-searched-articles'>ಪ್ರತಿಷ್ಠಿತ
ಕಾರ್ಪೊರೇಟ್ ಸಂಸ್ಥೆಗಳಿಗೆ ಗಣಿ ಗುತ್ತಿಗೆ ಪರವಾನಗಿ ಶಿಫಾರಸು ಮಾಡಲು ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರ ಪ್ರೇರಣಾ ಟ್ರಸ್ಟ್ ಮತ್ತು ಧವಳಗಿರಿ ಡೆವಲಪರ್ಸ್ ಲಾಭ ಪಡೆದಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ಧಾರವಾಡದ ಸಮಾಜ ಪರಿವರ್ತನಾ ಸಮುದಾಯ (ಎಸ್‌ಪಿಎಸ್) ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ.











Click it and Unblock the Notifications