• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಂಗಳವಾರ ವಿಧಾನಸೌಧಕ್ಕೆ ವಕೀಲರ ಮುತ್ತಿಗೆ

|
Jyoti Prakash Mirji & K N Subba Reddy
ಬೆಂಗಳೂರು, ಮಾ 19: ರಾಜ್ಯ ವಕೀಲರ ಸಂಘ ಮಂಗಳವಾರ ( ಮಾ 20) ವಿಧಾನಸೌಧ ಚಲೋ ನಡೆಸಲು ತೀರ್ಮಾನಿಸಿದೆ. ಆದರೆ ವಕೀಲರ ಉದ್ದೇಶಿತ ಈ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದಾರೆ.

ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಧಾನಸೌಧ ಚಲೋ ಕೈಗೊಳ್ಳುವುದು ವಕೀಲರ ಸಂಘದ ಉದ್ದೇಶ. ಈ ಸಂಬಂಧ ಸಂಘದ ಅಧ್ಯಕ್ಷ ಕೆ.ಎನ್‌.ಸುಬ್ಟಾರೆಡ್ಡಿ ಅವರು ಅನುಮತಿ ಕೋರಿ ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದರು.

ಬಜೆಟ್‌ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ 2 ಕಿ.ಮೀ.ವ್ಯಾಪ್ತಿಯಲ್ಲಿ ಮಾ.25ರ ಮಧ್ಯರಾತ್ರಿಯವರಗೆ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಯಲ್ಲಿರುತ್ತದೆ. ಆದ ಕಾರಣ ವಕೀಲರ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ.

ಇದೇ ವೇಳೆ, ಪೊಲೀಸ್‌ ಇಲಾಖೆಯ ಆದೇಶ ಧಿಕ್ಕರಿಸಿ ಮುತ್ತಿಗೆ ಹಾಕಿದರೆ ಉಂಟಾಗಬಹುದಾದ ಯಾವುದೇ ಅನಾಹುತಗಳಿಗೆ ವಕೀಲರ ಸಂಘವೇ ಹೊಣೆಯಾಗಬೇಕಾಗುತ್ತದೆ ಎಂದು ಪೋಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಪ್ರತಿಭಟನಾ ಮೆರವಣಿಗೆಗೆ ಅನುಮತಿ ನಿರಾಕರಿಸಿರುವ ಪೊಲೀಸ್ ಆಯುಕ್ತರ ಕ್ರಮವನ್ನು ಸುಬ್ಬಾರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ. ಪೊಲೀಸ್‌ ಇಲಾಖೆಯು ಅನಗತ್ಯವಾಗಿ ಬೆಂಗಳೂರು ನ್ಯಾಯಾಲಯದ ಸುತ್ತ ನಿಷೇಧಾಜ್ಞೆ ಹೇರಿದೆ. ಕೂಡಲೇ ನಿಷೇಧಾಜ್ಞೆಯನ್ನು ಹಿಂದಕ್ಕೆ ಪಡೆದು ವಕೀಲರಿಗೆ ಅನುಮತಿ ನೀಡಬೇಕು.

ಇಲ್ಲವಾದಲ್ಲಿ ಮುಂದೆ ಸಂಭವಿಸಬಹುದಾದ ಎಲ್ಲ ಅನಾಹುತಗಳಿಗೆ ಸರ್ಕಾರ ಮತ್ತು ಪೋಲೀಸ್ ಇಲಾಖೆಯೇ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಯಿಂದ ಸಮಾರು 10 ಸಾವಿರ ವಕೀಲರು ಭಾಗವಹಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು ವಕೀಲರು ಸುದ್ದಿಗಳುView All

English summary
Karnataka advocates plan rally in Bangalore to protest against failure of law and order in city court premises on 2 March 2012. However, COP Jyothi Prakash Mirji has not granted permission to Lawyers as section 144 is imposed in Vidhana Soudha area due to Budget Session

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more