2ನೇ ಪಿಯೂ ಗಣಿತ ಪರೀಕ್ಷೆ ಮುಂದೂಡಿಕೆ

ಮಾ.15 ರಿಂದ 30ರ ವರೆಗೆ ಪಿಯೂ ಪರೀಕ್ಷೆ ನಡೆಯುತ್ತಿದೆ. ರಾಜ್ಯದ ಒಟ್ಟು 923 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 5,96,739 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.[ವೇಳಾಪಟ್ಟಿ ನೋಡಿ]
ಪರೀಕ್ಷಾ ಅಕ್ರಮ ತಡೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಅಧಿಕಾರಿಗಳ ಜಾಗೃತದಳ ರಚಿಸಲಾಗಿದೆ.
ಆದರೂ, ಗಣಿತ ಪ್ರಶ್ನೆ ಪರೀಕ್ಷೆ ಪತ್ರಿಕೆ ಸೋರಿಕೆಯಾಗಿರುವುದು ಹೇಗೆ ಎಂಬುದು ತಿಳಿಯುತ್ತಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪದವಿ ಪೂರ್ವ ಪರೀಕ್ಷಾ ಮಂಡಳಿ ನಿರ್ದೇಶಕಿ ರಶ್ಮಿ ಹೇಳಿದರು.












Click it and Unblock the Notifications