ಯಡ್ಡಿ ವಿರುದ್ಧ FIR ರದ್ದು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿರುವುದು ಸರಿಯಿಲ್ಲ. ಯಡಿಯೂರಪ್ಪ ಅವರ ವಿರುದ್ಧ ಸಾಕಷ್ಟು ಸಾಕ್ಷಿಗಳು ಲಭ್ಯವಿದ್ದು, ಸಿಇಸಿ ತನಿಖೆ ವರದಿ ಜಾರಿಯಲ್ಲಿದೆ.
ಲೋಕಾಯುಕ್ತ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸದೆ ಮೇಲ್ನೋಟಕ್ಕೆ ಯಡಿಯೂರಪ್ಪ ಅವರ ಮೇಲಿನ ಆರೋಪಗಳು ಸುಳ್ಳು ಎನ್ನುವುದು ಎಷ್ಟರಮಟ್ಟಿಗೆ ಸರಿ. ನ್ಯಾಯಮೂರ್ತಿಗಳಿಗೆ ಸಾಕಷ್ಟು ಆಧಾರ ಸಿಕ್ಕಿಲ್ಲದ ಕಾರಣ, ಆದೇಶ ಈ ರೀತಿ ಬಂದಿರುವ ಸಾಧ್ಯತೆಯಿದೆ.
ಸುಪ್ರೀಂಕೋರ್ಟ್ ನಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ವಕೀಲ ಸಿರಾಜಿನ್ ಬಾಷಾ ಹೇಳಿದ್ದಾರೆ.
ಸೌತ್ ವೆಸ್ಟ್ ಕಂಪನಿಗೆ ಗಣಿ ಗುತ್ತಿಗೆ ನೀಡುವ ಮೂಲಕ ಪ್ರೇರಣಾ ಟ್ರಸ್ಟ್ 20 ಕೋಟಿ ಕಿಕ್ ಬ್ಯಾಕ್ ಪಡೆದ ಆರೋಪ ಹೊರೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ(ಮಾ.7) ರದ್ದುಗೊಳಿಸಿತ್ತು.












Click it and Unblock the Notifications