ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೂಹಗರಣದಿಂದ ಬಚಾವಾದ ಸಚಿವ ಸೋಮಣ್ಣ

By Srinath
|
Google Oneindia Kannada News

denotification-v-somanna-given-clean-chit-lokayukta
ಬೆಂಗಳೂರು, ಮಾ.21: ಭೂಹಗರಣದ ಸುಳಿಯಲ್ಲಿ ಸಿಲುಕಿ ಗಿರ್ರನೆ ತಿರುಗುತ್ತಿರುವ ಮಾಜಿ ಮುಖ್ಯಮಂತ್ರಿ ಮತ್ತು ಮಂತ್ರಿಗಳಿಗೆ ಬಿ-ರಿಪೋರ್ಟ್‌ ಎಂಬುದು ಸಂಜೀವಿನಿಯಾಗಿ ಕೈಹಿಡಿಯುತ್ತಿದೆ. ಯಡಿಯೂರಪ್ಪ, ಅಶೋಕ್‌ ನಂತರ ಇದೀಗ ಮತ್ತೆ ಯಡಿಯೂರಪ್ಪ ಹಾಗೂ ಮತ್ತೊಬ್ಬ ಸಚಿವ ಸೋಮಣ್ಣಗೂ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್‌ ನೀಡುವ ಸಲುವಾಗಿ ಇಂದು ಲೋಕಾಯುಕ್ತ ವಿಶೇಷ ಕೋರ್ಟಿನಲ್ಲಿ ಬಿ ರಿಪೋರ್ಟ್ ಸಲ್ಲಿಸಲಿದ್ದಾರೆ.

ಪ್ರಕರಣದ ಸಂಬಂಧ ಎಲ್ಲ ಆರೋಪಿಗಳನ್ನು ಮುಕ್ತಗೊಳಿಸಿ ನ್ಯಾಯಾಲಯಕ್ಕೆ ಬಿ-ರಿಪೋರ್ಟ್‌ ಸಲ್ಲಿಸುತ್ತಿರುವುದಾಗಿ ಲೋಕಾಯುಕ್ತ ಪೊಲೀಸರು ಮಂಗಳವಾರ ಮಧ್ಯಾಹ್ನ ದೂರುದಾರ ರವಿಕೃಷ್ಣಾ ರೆಡ್ಡಿಗೆ ನೋಟಿಸ್‌ ಮೂಲಕ ತಿಳಿಸಿದ್ದಾರೆ. ಆದರೆ ಇಂದು ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ, ಮುಂದಿನ ಕಾನೂನು ಹೋರಾಟಕ್ಕೆ ಸಜ್ಜಾಗುವುದಾಗಿ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸಚಿವ ಸೋಮಣ್ಣ ಅವರು ತಮ್ಮ ಪತ್ನಿ ಶೈಲಜಾ ಹೆಸರಿನಲ್ಲಿ ಕೆಂಗೇರಿ ಸಮೀಪದ ನಾಗದೇವನಹಳ್ಳಿಯಲ್ಲಿ 22 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿನೋಟಿಫಿಕೇಷನ್‌ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸಾಫ್ಟ್ ವೇರ್‌ ಇಂಜಿನಿಯರ್‌ ರವಿಕೃಷ್ಣಾ ರೆಡ್ಡಿ ಕಳೆದ ನವೆಂಬರ್‌ನಲ್ಲಿ ಲೋಕಾಯುಕ್ತ ಕೋರ್ಟ್‌ಗೆ ಖಾಸಗಿ ದೂರು ನೀಡಿದ್ದರು.

ಈ ದೂರಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೊದಲ ಆರೋಪಿಯಾಗಿದ್ದು, ಸಚಿವ ವಿ. ಸೋಮಣ್ಣ, ಪತ್ನಿ ಶೈಲಜಾ ಹಾಗೂ ಜಮೀನು ಮಾಲೀಕ ಡಿ. ಲಿಂಗಯ್ಯ ಅವರನ್ನು ಇತರೆಆರೋಪಿಗಳನ್ನಾಗಿ ಮಾಡಲಾಗಿತ್ತು. ಈ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾಯಾಲಯ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಈಗ ಬಿ-ರಿಪೋರ್ಟ್‌ ಸಲ್ಲಿಸಲು ಮುಂದಾಗಿರುವ ಲಕ್ಷಣಗಳು ಗೋಚರಿಸಿವೆ.

English summary
Denotification- It seems Lokayukta police are all set give clean chit to Minister V Somanna in a land scam. Ravi Krishna Reddy was the complaint.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X