ನಿತ್ಯಾನಂದರ ವಿರುದ್ಧ ಸಿಐಡಿ ಹೊಸ ಆರೋಪಪಟ್ಟಿ

ಚಿತ್ರನಟಿಯೊಬ್ಬಳ ಜೊತೆ ಅನೈತಿಕವಾಗಿ ರಾಸಲೀಲೆಯಲ್ಲಿ ನಿರತರಾಗಿದ್ದ ಪ್ರಕರಣದಲ್ಲಿ ಸಿಲುಕಿರುವ ಸ್ವಾಮಿ ನಿತ್ಯಾನಂದರ ವಿರುದ್ಧ ಹೊಸ ಆರೋಪಗಳನ್ನು ಸಿಐಡಿ ಪೊಲೀಸರು ರಾಮನಗರ ನ್ಯಾಯಾಲಯದಲ್ಲಿ ಸಲ್ಲಿಸಿದ್ದಾರೆ. ನಿತ್ಯಾನಂದ ಮಹಿಳೆಯೊಂದಿಗೆ ಮಾತ್ರವಲ್ಲ ಒಬ್ಬ ಪುರುಷನ ಜೊತೆ ಕೂಡ ಬಲವಂತದ ಮತ್ತು ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದರು ಎಂದು ಆರೋಪಿಸಿದ್ದಾರೆ.
ಸದ್ಯಕ್ಕೆ ಅಮೆರಿಕಾದ ಸಿಯಾಟಲ್ ವಾಸಿಯಾಗಿರುವ ವ್ಯಕ್ತಿಯೊಬ್ಬರು, ತಮ್ಮೊಂದಿಗೆ ನಿತ್ಯಾನಂದ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ ಎಂದು ಆರೋಪಿಸಿದ್ದ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅನುಮತಿ ಕೋರಿ ಅವರ ಹೇಳಿಕೆಗಳನ್ನು ಪಡೆದಿರುವುದಾಗಿ ಸಿಐಡಿ ಡೈರೆಕ್ಟರ್ ಜನರಲ್ ಆರ್ ಕೆ ದತ್ತಾ ಹೇಳಿದ್ದಾರೆ. ನಿತ್ಯಾನಂದರ ವಿರುದ್ಧ ಈ ಬಾರಿ ಬಲವಾದ ಸಾಕ್ಷಿ ಲಭಿಸಿದೆ ಎಂದು ತಿಳಿಸಿದ್ದಾರೆ.
ಬಿಡದಿ ಆಶ್ರಮದಲ್ಲಿ ಆರು ಬಾರಿ ಮತ್ತು ಸಿಯಾಟಲ್ ಹಾಗು ಅಮೆರಿಕಾದ ಇತರ ನಗರಗಳಲ್ಲಿರುವ ಆಶ್ರಮದಲ್ಲಿ ಕೂಡ ತಮ್ಮೊಂದಿಗೆ ನಿತ್ಯಾನಂದ ಲೈಂಗಿಕ ಕ್ರಿಯೆ ನಡೆಸಿದ್ದರು ಎಂದು ಆರೋಪಿಸಿರುವ ಅವರು, ಹೇಳಿಕೆ ನೀಡಿದ್ದಾರೆ ಮತ್ತು ಸಾಕ್ಷ್ಯಾಧಾರ ಒದಗಿಸಿದ್ದಾರೆ. ಸಿಐಡಿ ಅಧಿಕಾರಿಗಳು, ಈ ಆರೋಪಪಟ್ಟಿಯ ಜೊತೆಗೆ, ನಿತ್ಯಾನಂದರು ಅನೇಕ ಮಹಿಳೆಯರ ಜೊತೆ ಸಂಬಂಧ ಹೊಂದಿದ್ದನ್ನು ತಮ್ಮ ಬಳಿ ಒಪ್ಪಿಕೊಂಡಿದ್ದರೆಂದು ಅಮೆರಿಕಾದ ಮನಶ್ಶಾಸ್ತ್ರಜ್ಞರೊಬ್ಬರು ನೀಡಿರುವ ಹೇಳಿಕೆಯನ್ನು ನ್ಯಾಯಾಲಯಕ್ಕೆ ಒದಗಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications