ವಿಜಯ ಕರ್ನಾಟಕ ಸಂಪಾದಕ ಇ.ರಾಘವನ್ ಇನ್ನಿಲ್ಲ

ನಿನ್ನೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಾತ್ರಿ 9.20 ರಲ್ಲಿ ಅವರು ಕೊನೆಯುಸಿರೆಳೆದರು. ಪತ್ನಿ ಕುಮುದವಲ್ಲಿ (ಸೆಂಟ್ರಲ್ ಕಾಲೇಜು ಉಪನ್ಯಾಸಕಿ), ಪುತ್ರಿ ಸ್ವಾತಿ (ಇಂಜಿನಿಯರ್, ಇಂಗ್ಲೆಂಡ್), ಅಳಿಯ ಶಂಕರ್ ಹಾಗೂ ತಾಯಿ, ಸೋದರ, ಸೋದರಿಯನ್ನು ಅವರು ಅಗಲಿದ್ದಾರೆ. ನಮ್ಮನ್ನಗಲಿದ ಹಿರಿಯ ಚೇತನಕ್ಕೆ 'ದಟ್ಸ್ ಕನ್ನಡ'ದ ಭಾವಪೂರ್ಣ ಶ್ರದ್ಧಾಂಜಲಿ.
ಬೆಂಗಳೂರಿನಲ್ಲಿ 1951ರ ಜನವರಿ 18ರಂದು ಜನಿಸಿದ ರಾಘವನ್, ಗ್ಯಾಸ್ ಕಾಲೇಜಿನಲ್ಲಿ ಬಿಎ ಪದವಿ ಪಡೆದಿದ್ದರು. ಮೈಸೂರಿನ ಪತ್ರಿಕೆಯ ಮೂಲಕ ವೃತ್ತಿ ಜೀವನ ಆರಂಭಿಸಿದ ಅವರು ಆ ನಂತರ ಬೆಂಗಳೂರಿನಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ವರದಿಗಾರರಾದರು. 3 ದಶಕಗಳಿಗೂ ಹೆಚ್ಚು ಕಾಲ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕರಾಗಿದ್ದರು.
ಮಾಜಿ ಮುಖ್ಯಮಂತ್ರಿಗಳಾದ ದೇವರಾಜ ಅರಸು, ಗುಂಡೂರಾವ್ ಹಾಗೂ ರಾಮಕೃಷ್ಣ ಹೆಗಡೆ ಅವರ ಅವಧಿಯಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಕುರಿತು Broadening and Deepening Democracy Political Innovation in Karnataka ಎಂಬ ಪುಸ್ತಕ ಬರೆದಿದ್ದರು. University of Londonನ ಪ್ರೊಫೆಸರ್ James Manor ಈ ಪುಸ್ತಕದ ಸಹ ಲೇಖಕರಾಗಿದ್ದರು.
ದೆಹಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರರಾಗಿ ಹಲವು ವರ್ಷ ಕೆಲಸ ಮಾಡಿದ್ದ ಅವರು ಟೈಮ್ಸ್ ಸಮೂಹಕ್ಕೆ ಸೇರ್ಪಡೆಯಾಗಿ ಎಕನಾಮಿಕ್ ಟೈಮ್ಸ್‌ನ ಸಂಪಾದಕರಾಗಿ ಕೆಲಸ ಮಾಡಿದ್ದರು. ಕೆಲ ಕಾಲ ಡಿಎನ್‌ಎ ಪತ್ರಿಕೆಯ ರಾಜಕೀಯ ಅಂಕಣಕಾರರಾಗಿದ್ದರು. ನಂತರ ವಿಜಯ ನೆಕ್ಸ್ಟ್ ಪುರವಣಿಯ ಸಂಪಾದಕರಾಗಿದ್ದರು. 15 ತಿಂಗಳ ಹಿಂದೆ ವಿಶ್ವೇಶ್ವರ ಭಟ್ ಅವರು ವಿಜಯ ಕರ್ನಾಟಕ ಸಂಪಾದಕರಾಗಿ ನಿರ್ಗಮಿಸಿದ ನಂತರ ರಾಘವನ್ ಆಸ್ಥಾನವನ್ನು ಅಲಂಕರಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications