ಚುನಾವಣೆಗೆ ಸನ್ನದ್ಧರಾಗಲು ಸೋನಿಯಾ ಸೂಚನೆ

ಉಪ ಚುನಾವಣೆಯಲ್ಲಿ ಜಯ ಸಾಧಿಸಿದ ಜಯಪ್ರಕಾಶ್ ಹೆಗಡೆ ಅವರನ್ನು ಅಭಿನಂದಿಸಿದ ಸೋನಿಯಾ, ರಾಜ್ಯ ಬಿಜೆಪಿಯಲ್ಲಿ ಅರಾಜಕತೆ ಎದ್ದಿರುವುದರಿಂದ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಬಹುದು, ನೀವು ಯಾವುದಕ್ಕೂ ಸಿದ್ಧರಾಗಿರಿ ಎಂದು ಕಿವಿಮಾತು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ, ಕೇಂದ್ರ ಸಚಿವರಾದ ಕೆಎಚ್ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫರ್ನಾಂಡಿಸ್ ಮುಂತಾದವರು ಸೋನಿಯಾ ಗಾಂಧಿಯವರನ್ನು 10 ಜನಪಥ್ ನಿವಾಸದಲ್ಲಿ ಭೇಟಿ ಮಾಡಿ ರಾಜ್ಯದ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು.
ಭೇಟಿಯ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಪರಮೇಶ್ವರ್ ಅವರು, ದುರಾಡಳಿತದಲ್ಲಿ ಮುಳುಗಿರುವ ಬಿಜೆಪಿ ಸರಕಾರವನ್ನು ಸಂಘಟಿತ ಹೋರಾಟದ ಮುಖಾಂತರ ಕಿತ್ತೊಗೆಯುವುದು ಕಾಂಗ್ರೆಸ್‌ನ ಮುಂದಿರುವ ಗುರಿ ಎಂದರು. ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ದರಾಗಿರಿ ಎಂದು ಸೋನಿಯಾ ತಿಳಿಸಿರುವುದಾಗಿ ತಿಳಿಸಿದರು.












Click it and Unblock the Notifications