ರಾಜ್ಯಾದ್ಯಂತ 2 ಲಕ್ಷ ಕೋಟಿ ರು. ವಕ್ಫ್ ಆಸ್ತಿ ಗುಳುಂ

ವಕ್ಫ್ ಬೋರ್ಡ್‌ಗೆ ಸೇರಿದ ಆಸ್ತಿಯ ದುರುಪಯೋಗದ ಅಧ್ಯಯನ ನಡೆಸಲು ರಚಿಸಲಾಗಿದ್ದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರು ತನಿಖೆ ನಡೆಸಿ, 8 ಸಾವಿರ ಪುಟಗಳ ವಿಶೇಷ ವರದಿಯನ್ನು ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಸೋಮವಾರ ನೀಡಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ವರದಿಯಲ್ಲಿ ರೋಷನ್ ಬೇಗ್, ಖಮರುಲ್ ಇಸ್ಲಾಂ, ಸಿಎಂ ಇಬ್ರಾಹಿಂ, ಎಎಂ ಹಿಂಡಸಗೇರಿ, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರ ಹೆಸರುಗಳು ಪ್ರಸ್ತಾಪವಾಗಿದ್ದು, ವಿರೋಧ ಪಕ್ಷಗಳನ್ನು ಭಾರೀ ಇಕ್ಕಟ್ಟಿಗೆ ಸಿಲುಕಿಸಿದೆ. ಭೂ ಹಗರಣಗಳಲ್ಲಿ ಕಳಂಕ ಅಂಟಿಸಿಕೊಂಡಿದ್ದ ಬಿಜೆಪಿಗೆ ವಿರೋಧ ಪಕ್ಷಗಳ ವಿರುದ್ಧ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.
ಭೂ ಕಬಳಿಕೆ ಕುರಿತಂತೆ 1,800 ದೂರುಗಳ ಬಂದಿದ್ದ ಹಿನ್ನೆಲೆಯಲ್ಲಿ ಅಧ್ಯಯನಕ್ಕೆ ಸಮಿತಿ ರಚಿಸಲಾಗಿತ್ತು. ಅಧ್ಯಯನದ ಪ್ರಕಾರ, ಶೇ.50ರಷ್ಟು ಭೂಮಿಯನ್ನು ಪ್ರಭಾವಿ ವ್ಯಕ್ತಿಗಳು ತಮ್ಮ ಸ್ವಂತ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಸುಮಾರು 54 ಸಾವಿರ ಎಕರೆಗಳಲ್ಲಿ ಇರುವ 4.10 ಲಕ್ಷ ಕೋಟಿ ರು.ನಷ್ಟಿರುವ ಆಸ್ತಿಯ ಅರ್ಧಕ್ಕೂ ಹೆಚ್ಚು ಭಾಗವನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.
ಕೆಲವರು ನಕಲಿ ದಾಖಲೆ ಸೃಷ್ಟಿಸಿ ಭೂಮಿಯನ್ನು ತಮ್ಮ ವಶ ಮಾಡಿಕೊಂಡಿದ್ದರೆ, ಕೆಲವರು ತಮ್ಮದೇ ಆಸ್ತಿ ಎಂದುಕೊಂಡು ಮಾರಿಹಾಕಿದ್ದಾರೆ. ಕೆಲವಡೆ ಕಡಿಮೆ ಬಾಡಿಗೆ, ಹಲವೆಡೆ ಸರಿಯಾದ ಬಾಡಿಗೆಯನ್ನೇ ಕೊಡುತ್ತಿಲ್ಲ ಎಂದು ಅನ್ವರ್ ಅವರು ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ. ತನಿಖೆ ಶುರುವಾದ ನಂತರ ಆರೋಪ ಎದುರಿಸುವ ಹೆದರಿಕೆಯಿಂದ ಕೆಲವರು ತಲೆಮರೆಸಿಕೊಂಡಿದ್ದಾರೆ.
ಈ ವರದಿಯನ್ನು ಸ್ವೀಕರಿಸಿದ ಸದಾನಂದ ಗೌಡರು, ಅಲ್ಪಸಂಖ್ಯಾತರಿಗೆ ಸೇರಿದ ಈ ಆಸ್ತಿಯನ್ನು ಕಬಳಿಸಿದ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ, ಅವರ ವಿರುದ್ಧ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದು ಆಶ್ವಾಸನೆ ನೀಡಿದರು. ವಕ್ಫ್‌ಗೆ ಸೇರಿದ ಆಸ್ತಿಯಲ್ಲಿ ಒಂದು ಇಂಚು ಕೂಡ ದುರುಪಯೋಗವಾಗದಂತೆ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಸ್ತಿ ಒತ್ತುವರಿಯನ್ನು ಪತ್ತೆಹಚ್ಚಿ ಮರುವಶಪಡಿಸಿಕೊಳ್ಳಲಾಗವುದು ಎಂದು ಅವರು ನುಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications