ಕಸಾಪ ಅಧ್ಯಕ್ಷ ಸ್ಥಾನಕ್ಕೆ 11 ಕಟ್ಟಾಳುಗಳು ಸ್ಪರ್ಧೆ
ಬೆಂಗಳೂರು,ಮಾ.
29: ಈ ಬಾರಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ರಂಗೇರಿದೆ. ಕಸಾಪ ಕೇಂದ್ರ ಸ್ಥಾನಕ್ಕೆ 11 ಮಂದಿ ಕನ್ನಡ ಕಟ್ಟಾಳುಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಏ. 29ರಂದು ರಾಜ್ಯಾದ್ಯಂತ ಮತದಾನ ನಡೆಯಲಿದೆ. ಮೇ. 2ಕ್ಕೆ ಅಂತಿಮ ಫಲಿತಾಂಶ ಹೊರಬೀಳಲಿದೆ. id="toptextpromo">ಮಾ.
31ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ವಾಪಸ್ಸಿಗೆ ಏ. 5 ಕೊನೆಯ ದಿನ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಾ. 29ರಂದು ರಾಜ್ಯ ಎಲ್ಲ 30 ಜಿಲ್ಲಾ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ 237 ಉಮೇದುವಾರಿಕೆ ಸಲ್ಲಿಕೆಯಾಗಿದೆ. id='are-slot-1' class='oiad oi-axt oiadv'> id='top-searched-articles'>ಬೆಂಗಳೂರು
ಗ್ರಾಮಾಂತರ ಮತ್ತು ನಗರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 16 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ವಿಶೇಷ ಚುನಾವಣಾಧಿಕಾರಿಗಳು ಕೇಂದ್ರ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಅಂತಿಮಪಟ್ಟಿಯನ್ನು ಏ. 5ರಂದು ಆಖೈರುಗೊಳಿಸಲಿದ್ದಾರೆ.











Click it and Unblock the Notifications