BIALಗೆ ಕೆಂಪೇಗೌಡರ ಹೆಸರು, ಅಶೋಕ್ ಹರ್ಷ

ಕೆಂಪೇಗೌಡ ದಿನಾಚರಣೆ ಅಂಗವಾಗಿ ನಗರದ ನಾಲ್ಕು ಗಡಿ ಗೋಪುರಗಳಿಂದ ಆಗಮಿಸಿದ ಜ್ಯೋತಿಯನ್ನು ಸ್ವೀಕರಿಸಿ ಮಾತನಾಡಿದ ಅಶೋಕ್, ಕೇಂದ್ರ ಸರ್ಕಾರ ಸರ್ಕಾರ ಒಪ್ಪಿಗೆ ನೀಡಿರುವುದು ತುಂಬಾ ಸಂತೋಷದ ವಿಷ. ವಿಮಾನ ನಿಲ್ದಾಣದ ಮುಂಭಾಗದಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆ ಸ್ಥಾಪಿಸಲು ರಾಜಯ್ ಸರ್ಕಾರ ತೀರ್ಮಾನಿಸಿದೆ ಎಂದರು.
ಸಮಿತಿ ಶಿಫಾರಸ್ಸಿಗೆ ಮಾನ್ಯತೆ : ವಿಮಾನ ನಿಲ್ದಾಣ ಆರಂಭವಾದಾಗ ಅದಕ್ಕೆ ಹೆಸರೇನಿಡಬೇಕು ಎಂಬ ಬಗ್ಗೆ ಭಾರೀ ಚರ್ಚೆಗಳಾಗಿದ್ದವು. ಅಣ್ಣ ಬಸವಣ್ಣ, ಸರ್ ಎಂ ವಿಶ್ವೇಶ್ವರಯ್ಯ, ಕುವೆಂಪು, ಅಂಬೇಡ್ಕರ್, ಟಿಪ್ಪು ಸುಲ್ತಾನ್ ಮುಂತಾದ ಹೆಸರುಗಳು ಕೇಳಿಬಂದಿದ್ದವು.
ಡಾ ಹೇಮಚಂದ್ರ ಸಾಗರ್ ನೇತೃತ್ವದ 21 ಮಂದಿ ಸದಸ್ಯರ ಜಂಟಿ ಸದನ ಸಮಿತಿ BIALನ ಸಮಗ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸಿ ಕೆಂಪೇಗೌಡರ ಹೆಸರಿಡುವಂತೆ ಸರ್ಕಾರಕ್ಕೆ ಸೂಚಿಸಿತ್ತು. ನಿಲ್ದಾಣದಲ್ಲಿ ಕನ್ನಡ ಪತ್ರಿಕೆ ಒದಗಿಸುವುದು ಮತ್ತು ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕುವುದು ಹಾಗೂ ಎಚ್ಎಎಲ್ ನಿಲ್ದಾಣಕ್ಕೆ ಮರುಚಾಲನೆ ನೀಡಬೇಕು ಎಂದು ಕೂಡಾ ಹೇಳಲಾಗಿತ್ತು.












Click it and Unblock the Notifications