ಕಚೇರಿ ತೆರವುಗೊಳಿಸಿದ ಉಪಲೋಕಾ ಚಂದ್ರಶೇಖರಯ್ಯ

chandrashekaraiah-relinquishes-upalokayukta-office
ಬೆಂಗಳೂರು, ಏ.6: ಎರಡನೇ ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ನೇಮಕಗೊಂಡಿದ್ದನ್ನು ಹೈಕೋರ್ಟ್ ಅನೂರ್ಜಿತಗೊಳಿಸಿದ ಹಿನ್ನೆಲೆಯಲ್ಲಿ ಅವರು ಗುರುವಾರ ಕಚೇರಿಯನ್ನು ತೆರವು ಮಾಡಿದರು.

ಮಂಗಳವಾರ ಸಂಜೆ ಹೈಕೋರ್ಟ್ ಸುದೀರ್ಘ ತೀರ್ಪು ನೀಡುತ್ತಿದ್ದಂತೆ ಚಂದ್ರಶೇಖರಯ್ಯ ಉಪ ಲೋಕಾಯುಕ್ತರಾಗಿ ಮುಂದುವರಿಯುವುದು void ಅಗಿತ್ತು. ನಂತರ, ಬುಧವಾರ ರಜಾ ದಿನವಾದ್ದರಿಂದ ಚಂದ್ರಶೇಖರಯ್ಯ ನಿನ್ನೆ ಗುರುವಾರ ಕಚೇರಿಯಿಂದ ನಿರ್ಗಮಿಸಿದ್ದಾರೆ. ಅಲ್ಲಿಗೆ ರಾಜ್ಯದಲ್ಲಿ ಲೋಕಾಯುಕ್ತ ಕಚೇರಿ ಮತ್ತೊಂದು ಮಜಲಿಗೆ ಬಂದು ನಿಂತಿದೆ. ನ್ಯಾ. ಮಜ್ಜಗೆ ಒಬ್ಬರೇ ಈಗ ಲೋಕಾಯುಕ್ತಕ್ಕೆ ದಿಕ್ಕು.

ತಮ್ಮ ಗಮನಕ್ಕೆ ತಾರದೇ ಚಂದ್ರಶೇಖರಯ್ಯ ಅವರನ್ನು ಉಪ ಲೋಕಾಯುಕ್ತರ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಅವರು ಮುಖ್ಯಮಂತ್ರಿ ಡಿವಿ ಸದಾನಂದ ಗೌಡಗೆ ಪತ್ರ ಬರೆದಿದ್ದರು. ನಂತರ ಉಪ ಲೋಕಾಯುಕ್ತರ ನೇಮಕಾತಿ ಪ್ರಕ್ರಿಯೆ ವಿವಾದಕ್ಕೆ ಒಳಗಾಗಿತ್ತು. ಚಂದ್ರಶೇಖರಯ್ಯ ಅವರ ನೇಮಕಾತಿಯನ್ನೇ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ನಿವೃತ್ತ ನ್ಯಾಯಮೂರ್ತಿ ಆರ್. ಗುರುರಾಜನ್ ಅವರು ಕಳೆದ ಅಕ್ಟೋಬರ್‌ನಲ್ಲಿ ರಾಜೀನಾಮೆ ನೀಡಿದ್ದರು. ಬಳಿಕ ಎರಡನೇ ಉಪ ಲೋಕಾಯುಕ್ತರ ಹುದ್ದೆ ಖಾಲಿ ಉಳಿದಿತ್ತು. ಚಂದ್ರಶೇಖರಯ್ಯ ಅವರನ್ನು ಈ ಹುದ್ದೆಗೆ ನೇಮಕ ಮಾಡಿ ಜನವರಿ 21ರಂದು ಆದೇಶ ಹೊರಡಿಸಲಾಗಿತ್ತು. ಜ. 22ರಂದು ಅವರು ಪ್ರಮಾಣ ವಚನ ಸ್ವೀಕರಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಚಂದ್ರಶೇಖರಯ್ಯ ಅವರ ನೇಮಕಾತಿಯನ್ನು ಅನೂರ್ಜಿತಗೊಳಿಸಿ ಏಪ್ರಿಲ್ 3ರಂದು ತೀರ್ಪು ನೀಡಿತ್ತು. ತೀರ್ಪು ಪ್ರಕಟವಾದ ಬಳಿಕ ಅವರು ಕಚೇರಿಗೆ ಬಂದಿರಲಿಲ್ಲ. ಗುರುವಾರ ಮಧ್ಯಾಹ್ನ ಕಚೇರಿಗ ಬಂದ ಅವರು, ತಾವು ತಂದಿರಿಸಿದ್ದ ಕೆಲ ಖಾಸಗಿ ವಸ್ತುಗಳನ್ನು ತೆಗೆದುಕೊಂಡು ಕಚೇರಿಯಿಂದ ನಿರ್ಗಮಿಸಿದರು.

ಕಚೇರಿ ತೆರವು ಮಾಡುವ ಮುನ್ನ ಚಂದ್ರಶೇಖರಯ್ಯ ಅವರು ಲೋಕಾಯುಕ್ತದ ಕೆಲವು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದರು. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ತಾವು ಕಚೇರಿ ತೆರವು ಮಾಡುತ್ತಿರುವುದಾಗಿ ತಿಳಿಸಿ, ಹೋದರು ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+