ಏ.17ರ ತನಕ ಗಾಲಿ ರೆಡ್ಡಿಗೆ ಶುಭ ಸುದ್ದಿ ಸಿಗಲ್ಲ

Gali Reddy Bail Rejected
ಬೆಂಗಳೂರು, ಏ.8: ಹೆಚ್ಚಿನ ವಿಚಾರಣೆ ಅಗತ್ಯತೆ ಇರುವುದರಿಂದ ಆರೋಪಿಗಳಿಗೆ ಈ ಸಂದರ್ಭದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಬಿಐ ಕೋರ್ಟ್ ನ್ಯಾಯಮೂರ್ತಿಗಳು ಆದೇಶ ಹೊರಡಿಸಿಬಿಟ್ಟರು.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಆಪ್ತ ಸಹಾಯಕ ಮೆಹಫುಜ್ ಅಲಿ ಖಾನ್ ಇಬ್ಬರಿಗೂ ಏ.17ರ ತನಕ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ ಎಎಂಸಿ ಹಾಗೂ ಡೆಕ್ಕನ್ ಗಣಿ ಕಪನಿ ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಿತು.

ಹೆಚ್ಚುವರಿ ಸಿವಿಲ್ ಹಾಗೂ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಹಾಗೂ ಸಿಬಿಐ ವಿಶೇಷ ನ್ಯಾ ಬಿಎಂ ಅಂಗಡಿ ಅವರು ಗಾಲಿ ರೆಡ್ಡಿ ಹಾಗೂ ಅಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಅತ್ತ ಓಬಳಾಪುರಂ ಹಗರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಆಂಧ್ರಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ವೈ ಶ್ರೀಲಕ್ಷ್ಮಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಸೋಮವಾರ(ಏ.2) ನಿರಾಕರಿಸಿದೆ.

ಹೈದರಾಬಾದ್ ಕೋರ್ಟ್ ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಜಾಮೀನು ಅರ್ಜಿ ನಾಲ್ಕು ಬಾರಿ ವಜಾಗೊಂಡಿರುವುದನ್ನು ಇಲ್ಲಿ ಸ್ಮರಿಸಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+