ಶಾಸಕ ಸೋಮಲಿಂಗಪ್ಪ ಈಗ್ಲೋ ಆಗ್ಲೋ ಬಂಧನ

ಇದನ್ನು ಮನದಟ್ಟುಪಡಿಸಿಕೊಂಡಿರುವ ಸೋಮಲಿಂಗಪ್ಪ ಅವರೂ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮನ್ನು ಯಾವುದೇ ಕ್ಷಣದಲ್ಲಿ ಬಂಧಿಸಬಹುದೆಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಆರೋಪಿಯನ್ನು ಇನ್ನೂ ಏಕೆ ಬಂಧಿಸಿಲ್ಲ?: ಗಮನಾರ್ಹವೆಂದರೆ, ಕಳೆದ ವಾರ ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಧೀಶ ಸುಧೀಂದ್ರ ರಾವ್ 'ಆರೋಪಿಯನ್ನು ಇನ್ನೂ ಏಕೆ ಬಂಧಿಸಿಲ್ಲ?' ಎಂದು ಪ್ರಶ್ನಿಸಿದ್ದಾರೆ. ಇದು ಆರೋಪಿ ಸೋಮಲಿಂಗಪ್ಪನಿಗೆ ಬಂಧನದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಬಗ್ಗೆ ನ್ಯಾಯಾಧೀಶರು, ಲೋಕಾಯುಕ್ತ ಪೊಲೀಸರಿಂದ ವಿವರಣೆಯನ್ನೂ ಕೋರಿದ್ದಾರೆ. 'ಅಕ್ರಮ ಆಸ್ತಿ ಗಳಿಕೆ ಆರೋಪದ ಬಗ್ಗೆ ಆರೋಪಿ ವಿರುದ್ಧ ತನಿಖೆ ನಡೆಯುತ್ತಿದೆ. ಆದರೆ, ಇಲ್ಲಿಯವರೆಗೂ ಆರೋಪಿಯನ್ನು ಬಂಧಿಸಿಲ್ಲ. ಯಾವ ಕಾರಣಕ್ಕೆ ಆರೋಪಿಯನ್ನು ಬಂಧಿಸಿಲ್ಲ' ಎಂದು ನ್ಯಾಯಾಧೀಶರು ತನಿಖಾಧಿಕಾರಿಗಳನ್ನು ಕೇಳಿದ್ದಾರೆ.












Click it and Unblock the Notifications