ಕಾರ್ಕೋಟಕ ಸರ್ಪ ಕರ್ನಾಟಕಕ್ಕೆ ನೀರುಣಿಸಬೇಡಿ

ರಾಜ್ಯ ಸರಕಾರ ಹಾವಿಗೆ (ಕರ್ನಾಟಕ) ಹಾಲುಣಿಸುವ ಗುತ್ತಿಗೆ ವಹಿಸಿಕೊಂಡಂತೆ ಕಾಣುತ್ತಿದೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದೆ. ಆದರೆ ನಮ್ಮ ಸರಕಾರ ಆ ದೌರ್ಜನ್ಯಗಳನ್ನೆಲ್ಲ ಮರೆತು ಆ ರಾಜ್ಯಕ್ಕೆ ನೀರು ಒದಗಿಸಲು ತೀರ್ಮಾನಿಸಿದೆ. ಕರ್ನಾಟಕದ ಮರಾಠಿ ಭಾಷಿಕರಿಗೆ ಅನ್ಯಾಯ ಮಾಡುತ್ತಿರುವ ಕರ್ನಾಟಕ ಸರಕಾರಕ್ಕೆ ಒಂದೂ ಹನಿ ನೀರು ನೀಡಬಾರದು ಎಂದು ಪಕ್ಷದ ಮುಖವಾಣಿ 'ಸಾಮ್ನಾ' ಸಂಪಾದಕೀಯದಲ್ಲಿ ಠಾಕ್ರೆ ಹೇಳಿದ್ದಾರೆ.
ಬೆಳಗಾವಿ ಗಡಿ ವಿವಾದ ಸುದೀರ್ಘ ಕಾಲದಿಂದ ಇದ್ದರೂ ಉಭಯ ರಾಜ್ಯಗಳ ಬರ ಪೀಡಿತ ಜಿಲ್ಲೆಗಳಿಗೆ ಪರಸ್ಪರ ನೀರು ಹಂಚಿಕೊಳ್ಳಲು ಕರ್ನಾಟಕ ಮತ್ತು ಮಹಾರಾಷ್ಟ್ರ ಸರಕಾರಗಳು ಇತ್ತೀಚೆಗೆ ಒಪ್ಪಿಕೊಂಡಿವೆ. ಕರ್ನಾಟಕದ ಗಡಿಭಾಗದ ಜಿಲ್ಲೆಗಳಿಗೆ ದೂಧ್ಗಂಗಾ ಮತ್ತು ವರಣಾ ನದಿಗಳ ಜಲ ಪೂರೈಸಲು ಮಹಾರಾಷ್ಟ್ರ ಸರಕಾರ ಒಪ್ಪಿದರೆ, ಇದಕ್ಕೆ ಪ್ರತಿಯಾಗಿ ಕರ್ನಾಟಕ ಸರಕಾರ ಪಶ್ಚಿಮ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬರ ಪೀಡಿತ ಜಾತ್ ತಾಲೂಕಿಗೆ ನೀರು ಪೂರೈಸಲು ಸಮ್ಮತಿಸಿದೆ.
ಕರ್ನಾಟಕ ಸಚಿವರಾದ ಉಮೇಶ್ ಕತ್ತಿ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನೊಳಗೊಂಡ ನಿಯೋಗ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವೀರಾಜ್ ಚವಾಣ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಮಹಾರಾಷ್ಟ್ರದ ಕಾಂಗ್ರೆಸ್ ನೇತೃತ್ವದ ಸರಕಾರ ಮತ್ತು ಕರ್ನಾಟಕದ ಬಿಜೆಪಿ ಸರಕಾರ ಗಡಿ ವಿವಾದದ ರಾಜಕೀಯವನ್ನು ಬದಿಗಿಡಲು ಕೂಡಾ ತೀರ್ಮಾನಿಸಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications